ಪಿಎಂಶ್ರೀ ಕೆ.ಪಿ.ಸಿ, ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಸುಳ್ಯ, ಜೂ. 21: ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಸುಳ್ಯದ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ವಿಶೇಷ ಯೋಗಾಭ್ಯಾಸ ಕಾರ್ಯಕ್ರಮವನ್ನು ಜೂ. 21 ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಸುನಂದಾ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ವಿವಿಧ ಯೋಗಾಸನಗಳು, ಪ್ರಾಣಾಯಾಮ ಹಾಗೂ ಧ್ಯಾನದ ಮಹತ್ವವನ್ನು ವಿವರಿಸಿ ಪ್ರಾಯೋಗಿಕವಾಗಿ ಯೋಗಾಭ್ಯಾಸ ನಡೆಸಿಕೊಟ್ಟರು. ಯೋಗವು ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ನೆಮ್ಮದಿ, ಏಕಾಗ್ರತೆ ಹಾಗೂ ಆತ್ಮವಿಶ್ವಾಸವನ್ನು ವೃದ್ಧಿಸುವ ಅತ್ಯುತ್ತಮ ಸಾಧನವಾಗಿದೆ ಎಂದು ಅವರು ತಿಳಿಸಿದರು.
ವಿದ್ಯಾರ್ಥಿಗಳು ಉತ್ಸಾಹದಿಂದ ವಿವಿಧ ಯೋಗಾಸನಗಳನ್ನು ಅಭ್ಯಾಸ ಮಾಡಿ, ಯೋಗವನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವ ಸಂಕಲ್ಪ ಮಾಡಿದರು. ಕಾರ್ಯಕ್ರಮದ ಮೂಲಕ ಆರೋಗ್ಯಕರ ಜೀವನಶೈಲಿಯ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯ ಚಂದ್ರಶೇಖರ ಪಾರೆಪ್ಪಾಡಿ, ಯೋಗದ ಮಹತ್ವವನ್ನು ವಿವರಿಸಿ, ಪ್ರತಿಯೊಬ್ಬ ವಿದ್ಯಾರ್ಥಿಯೂ ಪ್ರತಿನಿತ್ಯ ಯೋಗಾಭ್ಯಾಸ ಮಾಡುವ ಮೂಲಕ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ವೃಂದ ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಸಹಕಾರ ನೀಡಿದರು. ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading