ಏನೆಕಲ್ಲು : ಅಮ್ಮನ ಹೆಸರಿನಲ್ಲಿ ಗಿಡ ನೆಡುವ ಕಾರ್ಯಕ್ರಮ

ಯೇನೆಕಲ್ಲು ಗ್ರಾಮದ ಹಿರಿಯರಾದ ಶ್ರೀ ಗಿರಿಯಪ್ಪ ಗೌಡ ಬಾಲಾಡಿ ಅವರ ನಿವಾಸಕ್ಕೆ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯ ಬಿಜಿಪಿ ಕಾರ್ಯಕರ್ತರಾದ ಶ್ರೀ ಗಿರಿಯಪ್ಪ ಗೌಡ ಬಾಲಾಡಿ ಮತ್ತು ಶ್ರೀ ಶೂರಪ್ಪ ಗೌಡ ಬಾಲಾಡಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ನಂತರ “ಅಮ್ಮನ ಹೆಸರಿನಲ್ಲಿ ಒಂದು ಗಿಡ” ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಸಂಸದರ ಮತ್ತು ಕಾರ್ಯಕರ್ತರ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನೆರವೇರಿತು. ಈ ಸಂದರ್ಭದಲ್ಲಿ ವೆಂಕಟ್ ವಳಲಂಬೆ, ಹರೀಶ್ ಕಂಜಿಪಿಲಿ, ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಜಾತ ಕಲ್ಲಾಜೆ ಮುಂತಾದವರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading