ಹವಾಮಾನ ಆಧಾರಿತ ಬೆಳೆ ವಿಮೆ ಕಂತು ಪಾವತಿಗೆ ಪ್ರಕಟಣೆ ಹೊರಡಿಸಿದ ತೋಟಗಾರಿಕಾ ಇಲಾಖೆ

ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರಿತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ, ನಷ್ಟ ಪರಿಹಾರವನ್ನು ತುಂಬಿಕೊಡುವ ನಿಟ್ಟಿನಲ್ಲಿ 2026-27ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆಯನ್ನು ಸರ್ಕಾರ ಜಾರಿಗೊಳಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿರುತ್ತದೆ. ಸದರಿ ಯೋಜನೆಯಡಿ ಬೆಳೆಸಾಲ ಪಡೆದಿರುವ ಹಾಗೂ ಬೆಳೆಸಾಲ ಹೊಂದಿಲ್ಲದ ರೈತರು ನೋಂದಾವಣೆಗೊಳ್ಳಬಹುದಾಗಿದ್ದು, ಬೆಳೆಸಾಲ ಪಡೆದ ರೈತರು ಬೆಳೆಸಾಲ ಹೊಂದಿರುವ ಬ್ಯಾಂಕ್ ನಲ್ಲಿ ಹಾಗೂ ಬೆಳೆಸಾಲ ಹೊಂದಿಲ್ಲದ ರೈತರು ತಮ್ಮ ಉಳಿತಾಯ ಖಾತೆ ಹೊಂದಿರುವ ಬ್ಯಾಂಕ್ ಗಳಲ್ಲಿ ಸದರಿ ಯೋಜನೆಯಡಿ ನೋಂದಾವಣೆಗೊಳ್ಳಬಹುದಾಗಿರುತ್ತದೆ. ಹಾಗೂ ಸಾಮಾನ್ಯ ಸೇವಾ ಕೇಂದ್ರ(CSC) ಮತ್ತು ಗ್ರಾಮ ಒನ್ ಗಳ ಮೂಲಕವೂ ನೋಂದಾವಣೆಗೆ ಅವಕಾಶ ಕಲ್ಪಿಸಲಾಗಿದೆ. ಈ ಯೋಜನೆಯಡಿ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ರೈತರು ಪಾವತಿಸಬೇಕಾದ ಪ್ರೀಮಿಯಂ ಮೊತ್ತ ಪ್ರತೀ ಹೆಕ್ಟೇರ್ ಗೆ ಅಡಿಕೆಗೆ ರೂ.6,400/- ಹಾಗೂ ಕಾಳುಮೆಣಸಿಗೆ ರೂ.2,350/- ಗಳಾಗಿರುತ್ತದೆ. ಈ ಯೋಜನೆಯಡಿ ನೋಂದಾವಣೆಗೊಳ್ಳಲು 31-07-2026 ಅಂತಿಮ ದಿನಾಂಕವಾಗಿದ್ದು, ರೈತರು ಸದರಿ ಯೋಜನೆಯಡಿ ನೋಂದಾವಣೆಗೊಂಡು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕಾಗಿ ತೋಟಗಾರಿಕಾ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದರಿ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ವಿಮಾ ಸಂಸ್ಥೆಯಾಗಿ ಪ್ರಸಕ್ತ ಸಾಲಿಗೆ TATA AIG ಸಂಸ್ಥೆಯು ಆಯ್ಕೆಯಾಗಿದ್ದು, ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಪ್ರತಿನಿಧಿ ಅಥವಾ ತೋಟಗಾರಿಕಾ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದ್ದು, ಸಂಪರ್ಕಿಸುವ ವಿವರ ಈ ಕೆಳಗಿನಂತಿದೆ.

ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಐ.ಕೆ ದೊಡ್ಡಮನಿ, ತೋಟಗಾರಿಕೆ ಜಂಟಿನಿರ್ದೇಶಕರು, ಜಿ.ಪಂ, ದಕ್ಷಿಣ ಕನ್ನಡ – 9448999226
ಮಂಗಳೂರಿಗೆ ಸಂಬಂಧಿಸಿದಂತೆ ಪ್ರವೀಣ.ಕೆ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ, ಮಂಗಳೂರು – 9449258204
ಬಂಟ್ವಾಳಕ್ಕೆ ಸಂಬಂಧಿಸಿದಂತೆ ಜೋ ಪ್ರದೀಪ್ ಡಿಸೋಜ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ, ಬಂಟ್ವಾಳ – 9448206393
ಪುತ್ತೂರಿಗೆ ಸಂಬಂಧಿಸಿದಂತೆ ಶ್ರೀಮತಿ ರೇಖಾ.ಎ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ, ಪುತ್ತೂರು – 9731854527
ಸುಳ್ಯಕ್ಕೆ ಸಂಬಂಧಿಸಿದಂತೆ ಪ್ರಮೋದ್.ಸಿ.ಎಂ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ, ಸುಳ್ಯ – 9880993238
ಬೆಳ್ತಂಗಡಿಗೆ ಸಂಬಂಧಿಸಿದಂತೆ ಚಂದ್ರಶೇಖರ ಕೆ.ಎಸ್, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ, ಬೆಳ್ತಂಗಡಿ – 9448336863
ಅಶುತೋಶ್, TATA AIG ಸಂಸ್ಥೆಯ ಪ್ರತಿನಿಧಿ – 8809140983

(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading