ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಬೆಳ್ಳಿ ಹಬ್ಬದ ಅಂಗವಾಗಿ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮ

ಸುಳ್ಯ : ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಪೆಥಾಲಜಿ ವಿಭಾಗದ ವತಿಯಿಂದ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಬೆಳ್ಳಿ ಹಬ್ಬದ ಅಂಗವಾಗಿ “PATHO SPECTRUM 2026 – Integrated CME on Gynecologic and Breast Pathology” ಎಂಬ ಸಮಗ್ರ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮವನ್ನು ಜೂನ್ 23, 2026 ರಂದು ಆಯೋಜಿಸಲಾಯಿತು.

. . . . . . . . .

ಕಾರ್ಯಕ್ರಮವು ಗಣ್ಯರ ಸಮ್ಮುಖದಲ್ಲಿ ಉದ್ಘಾಟನೆಗೊಂಡಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎ.ಒ.ಎಲ್.ಇ(ರಿ.) ಸುಳ್ಯ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದ ಅವರು ವಹಿಸಿ ಮಾತನಾಡಿ “ಸಂಸ್ಥೆಯು ಶೈಕ್ಷಣಿಕ ಉತ್ಕೃಷ್ಟತೆಗೆ ನೀಡುತ್ತಿರುವ ಆದ್ಯತೆಯನ್ನು ವಿವರಿಸಿದರು. ಬೆಳ್ಳಿ ಹಬ್ಬದ ಸಂಭ್ರಮದ ಸಂದರ್ಭದಲ್ಲಿ ಉನ್ನತ ಮಟ್ಟದ ಶೈಕ್ಷಣಿಕ ಕಾರ್ಯಕ್ರಮವನ್ನು ಆಯೋಜಿಸಿದ ಪ್ಯಾಥಾಲಜಿ ವಿಭಾಗದ ಪ್ರಯತ್ನವನ್ನು ಶ್ಲಾಘಿಸಿದರು”

. . . . . . .

ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಡೀನ್ ಡಾ. ನೀಲಾಂಬಿಕೈ ನಟರಾಜನ್ ಅವರು ಉದ್ಘಾಟನಾ ಭಾಷಣದಲ್ಲಿ ನಿರಂತರ ವೈದ್ಯಕೀಯ ಶಿಕ್ಷಣದ ಅಗತ್ಯತೆ, ವಿವಿಧ ವೈದ್ಯಕೀಯ ವಿಭಾಗಗಳ ನಡುವಿನ ಸಹಯೋಗ ಹಾಗೂ ಪ್ಯಾಥಾಲಜಿ ಕ್ಷೇತ್ರದಲ್ಲಿ ವೇಗವಾಗಿ ಬೆಳೆಯುತ್ತಿರುವ ಹೊಸ ತಂತ್ರಜ್ಞಾನಗಳೊಂದಿಗೆ ಹೊಂದಿಕೊಳ್ಳುವ ಮಹತ್ವವನ್ನು ವಿವರಿಸಿದರು.

ವೇದಿಕೆಯಲ್ಲಿ ಮೈಸೂರು ಮೆಡಿಕಲ್ ಕಾಲೇಜಿನ ಪ್ಯಾಥಾಲಜಿ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥರಾದ ಡಾ. ಶರತ್ ಕುಮಾರ್ ಹಾಗೂ ಕರ್ನಾಟಕ ಮೆಡಿಕಲ್ ಕೌನ್ಸಿಲ್ ವೀಕ್ಷಕರು ಸೇರಿದಂತೆ ವಿವಿಧ ಸಂಸ್ಥೆಗಳ ಗಣ್ಯರು ಹಾಗೂ ತಜ್ಞರು ಉಪಸ್ಥಿತರಿದ್ದರು.

ವೈಜ್ಞಾನಿಕ ಅಧಿವೇಶನಗಳಲ್ಲಿ ವಿವಿಧ ಕ್ಷೇತ್ರಗಳ ತಜ್ಞರು ಉಪನ್ಯಾಸ ನೀಡಿದರು. ಪ್ರಮುಖವಾಗಿ:ಡಾ. ತೊಪ್ಪಿಲ್ ರೀಬಾ ಫಿಲಿಪೋಸ್, ಪ್ರಾಧ್ಯಾಪಕಿ ಹಾಗೂ ಮುಖ್ಯಸ್ಥೆ, ಪ್ಯಾಥಾಲಜಿ ವಿಭಾಗ, AJ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್, ಮಂಗಳೂರು. ಡಾ. ರವಿಕಾಂತ್ ಜಿ.ಓ., ಪ್ರಾಧ್ಯಾಪಕರು, ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗ, KVG ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಸುಳ್ಯ. ಡಾ. ನಿಶಾ ಜೆ. ಮಾರ್ಲಾ, ಪ್ರಾಧ್ಯಾಪಕಿ ಹಾಗೂ ಮುಖ್ಯಸ್ಥೆ, ಪ್ಯಾಥಾಲಜಿ ವಿಭಾಗ, ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು, ಮಂಗಳೂರು, ಡಾ. ಅನುರಾಧಾ ಕ್ಯಾಲಿಕಟ್ ಕಿಣಿ ರಾವ್, ಪ್ರಾಧ್ಯಾಪಕಿ, ಪ್ಯಾಥಾಲಜಿ ವಿಭಾಗ, ಕಸ್ತೂರ್ಬಾ ಮೆಡಿಕಲ್ ಕಾಲೇಜು, ಮಣಿಪಾಲ.

ಡಾ. ಚತುರ ಕೆ.ಆರ್., ಪ್ರಾಧ್ಯಾಪಕರು, ಪ್ಯಾಥಾಲಜಿ ವಿಭಾಗ, FAMEHRI, ಮೈಸೂರು. ಡಾ. ಗುರುಪ್ರಸಾದ್ ಭಟ್, ಮುಖ್ಯ ವೈದ್ಯಕೀಯ ಆಂಕಾಲಜಿಸ್ಟ್, ಕನಚೂರು ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್, ಮಂಗಳೂರು. CMEಯಲ್ಲಿ ಗರ್ಭಕಂಠದ ಪ್ಯಾಥಾಲಜಿ, ಕೊಲ್ಪೋಸ್ಕೋಪಿ ಮತ್ತು CIN ನಿರ್ವಹಣೆ, ಎಂಡೊಮೆಟ್ರಿಯಲ್ ಕಾರ್ಸಿನೋಮಾದ ಆಣ್ವಿಕ ವರ್ಗೀಕರಣ, ಅಂಡಾಶಯದ ಎಪಿಥೀಲಿಯಲ್ ಟ್ಯೂಮರ್‌ಗಳು, ಸ್ತನ ಸೈಟಾಲಜಿ ಮತ್ತು ಕೋರ್ ಬಯಾಪ್ಸಿ ಹಾಗೂ ಸ್ತನ ಕ್ಯಾನ್ಸರ್ ನಿರ್ವಹಣೆಯಲ್ಲಿ ಆಣ್ವಿಕ ಪ್ಯಾಥಾಲಜಿಯ ಪಾತ್ರದ ಕುರಿತು ಸಮಗ್ರ ಚರ್ಚೆಗಳು ನಡೆದವು.

ಕಾರ್ಯಕ್ರಮದಲ್ಲಿ ಪ್ಯಾಥಾಲಜಿ ವಿಭಾಗದ ಪ್ರಾಧ್ಯಾಪಕಿ ಹಾಗೂ ಮುಖ್ಯಸ್ಥೆ ಮತ್ತು ಕಾರ್ಯಕ್ರಮದ ಸಂಘಟನಾ ಅಧ್ಯಕ್ಷರಾದ ಡಾ. ಸತ್ಯವತಿ ಆರ್. ಆಳ್ವ ಅವರು ಸ್ವಾಗತ ಭಾಷಣ ನೀಡಿ, ಗಣ್ಯರನ್ನು ಸ್ವಾಗತಿಸಿದರು. ಕಾರ್ಯಕ್ರಮದ ಸಮಾರೋಪದಲ್ಲಿ ಸಂಘಟನಾ ಕಾರ್ಯದರ್ಶಿ ಹಾಗೂ ಪ್ಯಾಥಾಲಜಿ ವಿಭಾಗದ ಪ್ರಾಧ್ಯಾಪಕಿ ಡಾ. ನವ್ಯ ಬಿ.ಎನ್. ಅವರು ವಂದನಾರ್ಪಣೆ ಸಲ್ಲಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ವೈದ್ಯಕೀಯ ಸಂಸ್ಥೆಗಳಾದ ಎ.ಜೆ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್, ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು, ಯೆನೆಪೊಯ ಮೆಡಿಕಲ್ ಕಾಲೇಜು, ಶ್ರೀನಿವಾಸ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್, ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ, ಕಸ್ತೂರ್ಬಾ ಮೆಡಿಕಲ್ ಕಾಲೇಜು ಮಣಿಪಾಲ, ಮೈಸೂರು ಮೆಡಿಕಲ್ ಕಾಲೇಜು, ಕೊಡಗು ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್, ಕನಚೂರು ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಸೇರಿದಂತೆ ವಿವಿಧ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಹಿರಿಯ ವೈದ್ಯರು ಭಾಗವಹಿಸಿದ್ದರು.

ಈ CME ಕಾರ್ಯಕ್ರಮಕ್ಕೆ ವೈದ್ಯಕೀಯ ಕ್ಷೇತ್ರದಿಂದ ಭರ್ಜರಿ ಸ್ಪಂದನೆ ದೊರಕಿದ್ದು, 270ಕ್ಕೂ ಹೆಚ್ಚು ಪ್ರತಿನಿಧಿಗಳು ನೋಂದಾಯಿಸಿಕೊಂಡಿದ್ದರು. ಕರ್ನಾಟಕದ ವಿವಿಧ ವೈದ್ಯಕೀಯ ಕಾಲೇಜುಗಳ ಪ್ರಾಧ್ಯಾಪಕರು, ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ವೈದ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading