ಮುರುಳ್ಯದಲ್ಲಿ ಕೆರೆಗೆ ಬಿದ್ದು ಅವಳಿ ಮಕ್ಕಳ ಸಾವು | ಸಂತ್ರಸ್ತ ಕುಟುಂಬಕ್ಕೆ ₹10 ಲಕ್ಷ ಪರಿಹಾರ ನೀಡಲು ಎಸ್‌ಡಿಪಿಐ ಆಗ್ರಹ

ಸುಳ್ಯ: ಜೂ. 20ರಂದು ಮುರುಳ್ಯ ಗ್ರಾಮದ ಕಡೀರದಲ್ಲಿ ಆಕಸ್ಮಿಕವಾಗಿ ಕೆರೆಗೆ ಬಿದ್ದು, ವೆಲ್ಡಿಂಗ್ ಕೆಲಸಗಾರ ವಸಂತ ಅವರ ಐದು ವರ್ಷದ ಇಬ್ಬರು ಅವಳಿ ಮಕ್ಕಳು ಮೃತಪಟ್ಟಿರುವ ಘಟನೆಯು ಅತ್ಯಂತ ದಾರುಣವಾಗಿದ್ದು, ಇಡೀ ಜಿಲ್ಲೆಯನ್ನೇ ಶೋಕ ಸಾಗರದಲ್ಲಿ ಮುಳುಗಿಸಿದೆ.

. . . . . . . . .

ಆರ್ಥಿಕವಾಗಿ ಹಿಂದುಳಿದಿರುವ ಮೃತರ ಪೋಷಕರ ನೋವು ವರ್ಣನಾತೀತವಾಗಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರ ಮಾನವೀಯತೆಯ ಆಧಾರದ ಮೇಲೆ ಸಂತ್ರಸ್ತ ಕುಟುಂಬಕ್ಕೆ ಕನಿಷ್ಠ ₹10 ಲಕ್ಷ ಪರಿಹಾರ ಘೋಷಿಸಬೇಕೆಂದು ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಶರೀಫ್ ನಿಂತಿಕಲ್ ರವರು ಒತ್ತಾಯಿಸಿದ್ದಾರೆ‌.

. . . . . . .

ದುರ್ಘಟನೆ ಸಂಭವಿಸಿದ ಮುರುಳ್ಯವು ಸ್ಥಳೀಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಸ್ವಗ್ರಾಮವಾಗಿದ್ದು, ಸಂತ್ರಸ್ತ ಕುಟುಂಬದ ಸ್ಥಿತಿಗತಿಗಳ ಬಗ್ಗೆ ಅವರಿಗೆ ಅರಿವಿರುತ್ತದೆ. ಆದ್ದರಿಂದ, ಶಾಸಕರು ವಿಶೇಷ ಆಸಕ್ತಿ ವಹಿಸಿ ಮುಖ್ಯಮಂತ್ರಿ ಪರಿಹಾರ ನಿಧಿ ಹಾಗೂ ಕೇಂದ್ರ ಸರ್ಕಾರದ ಎಕ್ಸ್‌ಗ್ರೇಷಿಯಾ ನಿಧಿಯಿಂದ ಪರಿಹಾರ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಪರಿಹಾರವು ಮಕ್ಕಳನ್ನು ಕಳೆದುಕೊಂಡಿರುವ ಪೋಷಕರ ನೋವನ್ನು ಸಂಪೂರ್ಣವಾಗಿ ನಿವಾರಿಸಲು ಸಾಧ್ಯವಿಲ್ಲವಾದರೂ, ಕಷ್ಟದ ಪರಿಸ್ಥಿತಿಯಲ್ಲಿರುವ ಕುಟುಂಬಕ್ಕೆ ಇದೊಂದು ಆಸರೆಯಾಗಲಿದೆ.
ಈ ಹಿಂದೆಯೂ ಹಲವಾರು ಕಡೆಗಳಲ್ಲಿ ಆಕಸ್ಮಿಕ ದುರ್ಘಟನೆಗಳು ನಡೆದಾಗ ಮಾನವೀಯ ನೆಲೆಯಲ್ಲಿ ಸರ್ಕಾರ ಪರಿಹಾರ ಘೋಷಿಸಿದ ನಿದರ್ಶನಗಳಿವೆ.

ಈ ನಿಟ್ಟಿನಲ್ಲಿ ಸ್ಥಳೀಯ ಶಾಸಕರು, ಸರ್ಕಾರದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕೂಡಲೇ ಸ್ಪಂದಿಸಿ, ಸಂತ್ರಸ್ತ ಕುಟುಂಬಕ್ಕೆ ಗರಿಷ್ಠ ಮಟ್ಟದ ಪರಿಹಾರ ದೊರಕಿಸಿಕೊಡಬೇಕೆಂದು ಅವರು ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading