ಪುತ್ತೂರಿನ ಅಕ್ಷಯ ಪದವಿಪೂರ್ವ ಕಾಲೇಜಿನಲ್ಲಿ ಫ್ರೆಷಸ್ ಡೇ ಮತ್ತು ಟ್ಯಾಲೆನ್ಸ್ ಡೇ 

ಪುತ್ತೂರು : ಅಕ್ಷಯ ಎಜ್ಯುಕೇಷನ್ & ಚಾರಿಟೇಬಲ್ ಟ್ರಸ್ಟ್ ಆಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಪದವಿ ಪೂರ್ವ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿಗಳು ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಈ ಶೈಕ್ಷಣಿಕ ವರ್ಷದಲ್ಲಿ ಕಾಲೇಜಿಗೆ ಸ್ವಾಗತಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಜಯಂತ್ ನಡುಬೈಲುರವರು ಅಧ್ಯಕ್ಷತೆಯನ್ನು ವಹಿಸಿ, “ಸ್ವಾಗತ ಕಾರ್ಯಕ್ರಮ ಹಿರಿಯ ಮತ್ತು ಕಿರಿಯ ವಿದ್ಯಾರ್ಥಿಗಳ ನಡುವೆ ಬಾಂಧವ್ಯ ಬೆಳೆಸುವ ಒಂದು ಸೇತುವೆಯಾಗಲಿದೆ. ಮುಂದಿನ ಎಲ್ಲಾ ಕಾರ್ಯಕ್ರಮಗಳಲ್ಲಿ ಜೊತೆ ಸೇರಿ ಕಾರ್ಯಕ್ರಮವನ್ನು ಯಶಸ್ಸುಗೊಳಿಸಲು ಕಾರ್ಯಕ್ರಮ ಒಂದು ಒಳ್ಳೆಯ ಅವಕಾಶ ನೀಡಿದೆ. ಹಾಗೆಯೇ ಟ್ಯಾಲೆನ್ಸ್ ಡೇ ಕೂಡ ಈ ಕಾರ್ಯಕ್ರಮದೊಂದಿಗೆ ಹಮ್ಮಿಕೊಂಡಿದ್ದು, ತಮ್ಮದೇ ಆದ ಪ್ರತಿಭೆ ಇದ್ದೇ ಇರುತ್ತದೆ. ಅದನ್ನು ಪ್ರದರ್ಶಿಸುವ ಧೈರ್ಯದ ಮೊದಲ ಹೆಜ್ಜೆ ಇಡಲು ಈ ಕಾರ್ಯಕ್ರಮ ಮತ್ತು ಒಂದು ಒಳ್ಳೆಯ ವೇದಿಕೆಯನ್ನು ಕಲ್ಪಿಸಿಕೊಟ್ಟಿದೆ” ಎಂದರು. ಪದವಿ ಕಾಲೇಜಿನ ಪ್ರಾಂಶುಪಾಲ ಸಂಪತ್.ಕೆ ಪಕ್ಕಳರವರು ಮಾತನಾಡಿ “ಅಕ್ಷಯ ಸಮೂಹ ಸಂಸ್ಥೆಯಲ್ಲಿ ಕೇವಲ ಪಾಠ ಅಲ್ಲದೆ ಪಠ್ಯೆತರ ಚಟುವಟಿಕೆಯಲ್ಲಿ ಮಕ್ಕಳ ಭಾಗವಹಿಸುವಿಕೆ ಬಹು ಮುಖ್ಯ” ಎಂದು ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು. 

. . . . . . . . .

ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಗಂಗಾರತ್ನರವರು ಪ್ರಾಸ್ತಾವಿಕವಾಗಿ ಮಾತನಾಡಿ, “ವಿದ್ಯಾರ್ಥಿಗಳ ಜೀವನದಲ್ಲಿ ಕ್ರಿಯಾಶೀಲತೆ ಎನ್ನುವುದು ಬಹಳ ಮುಖ್ಯ ಅದರಂತೆ ಈ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿ, ತಮ್ಮಲ್ಲಿರುವ ವಿವಿಧ ಪ್ರತಿಭೆಗಳನ್ನು ಅನಾವರಣಗೊಳಿಸಿಕೊಳ್ಳಬೇಕು” ಎಂದರು.

. . . . . . .

ಸಂಸ್ಥೆಯ ಆಡಳಿತ ಅಧಿಕಾರಿ ಅರ್ಪಿತ್.ಟಿ ರವರು ಮಾತನಾಡಿ “ಮಕ್ಕಳ ಪ್ರತಿಭೆಗಳನ್ನು ಅನಾವರಣಗೊಳಿಸಬೇಕು ಎನ್ನುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದರ ಸದುಪಯೋಗ ಪಡೆದುಕೊಳ್ಳುವಂತೆ” ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು. 

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶೈಕ್ಷಣಿಕ ನಿರ್ದೇಶಕ ಅಭಿಲಾಶ್ ಕ್ಷತ್ರಿಯರವರು ಮಾತನಾಡಿ, “ವಿದ್ಯಾರ್ಥಿಗಳಲ್ಲಿ ಸಮಯ ಪ್ರಜ್ಞೆ ಮುಖ್ಯ ಅದನ್ನು ಅಳವಡಿಸಿಕೊಂಡು ಜೀವನದಲ್ಲಿ ಮುಂದೆ ಬರಲು” ತಿಳಿಸಿದರು.

ಕಾರ್ಯಕ್ರಮದಲ್ಲಿ ಬೋಧಕರು ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading