ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪೋಲಿಯೋ ಲಸಿಕಾ ಅಭಿಯಾನ

ಸುಬ್ರಹ್ಮಣ್ಯ ಜೂನ್ 28 : ಭಾನುವಾರ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರ, ರೋಟರಿ ಕ್ಲಬ್ ಸುಬ್ರಹ್ಮಣ್ಯ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಇವುಗಳ ಆಶ್ರಯದಲ್ಲಿ ಕುಕ್ಕೆ ಶ್ರೀ ದೇವಳದ ಮುಂಭಾಗದಲ್ಲಿ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಂಸ್ಥೆ ಬಸ್ ನಿಲ್ದಾಣದಲ್ಲಿ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಶ್ರೀ ದೇವಳದ ಗೋಪುರ ಸಮೀಪ ವ್ಯವಸ್ಥಾಪನಾ ಸಮಿತಿ ಸದಸ್ಯ ಅಶೋಕ್ ನೆಕ್ರಾಜೆ ಹಾಗೂ ಕೆ.ಎಸ್.ಆರ್.ಟಿ.ಸಿ ನಿಲ್ದಾಣದಲ್ಲಿ ಸುಬ್ರಹ್ಮಣ್ಯ ರೋಟರಿ ಕ್ಲಬ್ ಅಧ್ಯಕ್ಷ ಜಯಪ್ರಕಾಶ್.ಆರ್ ಲಸಿಕಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.

. . . . . . . . .

ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ರೋಟರಿ ಕ್ಲಬ್ ಪೂರ್ವಾಧ್ಯಕ್ಷ ವಿಶ್ವನಾಥ ನಡುತೋಟ, ಕೆ.ಎಸ್.ಆರ್.ಟಿ.ಸಿ ಸಂಚಾರ ನಿಯಂತ್ರಣಾಧಿಕಾರಿ ಬಾಬು, ಹಿಮಾಣಿ ಸಮೂಹ ಸಂಸ್ಥೆಯ ಮಾಲಕರಾದ ರೋಷನ್ ರೈ, ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿ ಡಾ.ರಶ್ಮಿ ರೈ, ಆರೋಗ್ಯ ನಿರೀಕ್ಷಕರಾದ ಉಮ್ಮರ್ ಖಾನ್, ಫಾರ್ಮಸಿಸ್ಟ್ ಹೇಮಂತ್, ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತರಾಧ ಸುಜಾತ, ಜಯಂತಿ, ನಾಗಮ್ಮ, ಲಲಿತ, ಅಂಗನವಾಡಿ ಕಾರ್ಯಕರ್ತೆಯರಾದ ಉಷಾ ಹಾಗೂ ಅಶ್ವಿನಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading