ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾರ್ಗದರ್ಶನ ಕಾರ್ಯಕ್ರಮ

ಸುಳ್ಯ, ಜು. 4: ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜು, ಸುಳ್ಯದಲ್ಲಿ ಶನಿವಾರ ಪಿಯುಸಿ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ಮಾರ್ಗದರ್ಶನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

. . . . . . . . .

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್‌ನ ಅಧ್ಯಕ್ಷರಾದ ರೊ. ಮೇಜರ್ ಡೋನರ್ ಲತಾ ಮಧುಸೂದನ್ ವಹಿಸಿದ್ದರು. ಕಾಲೇಜಿನ ಸಂಚಾಲಕರಾದ ರೊ. ಪಿಪಿ ಎಂಪಿಎಚ್ಎಫ್ ಪ್ರಭಾಕರನ್ ನಾಯರ್ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಮಹತ್ವವನ್ನು ವಿವರಿಸಿ ಮಾತನಾಡಿದರು.

. . . . . . .

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಉಜಿರೆಯ ಎಸ್.ಡಿ.ಎಂ. ಪದವಿಪೂರ್ವ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀ ರಾಜೇಶ್ ಕೆ. ಅವರು ಜೆಇಇ, ನೀಟ್, ಸಿಇಟಿ, ಸಿಎಲ್‌ಎಟಿ, ಸಿಎ, ಸಿಎಸ್ ಸೇರಿದಂತೆ ವಿವಿಧ ವೃತ್ತಿಪರ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಗುರಿ ನಿಗದಿಪಡಿಸಿಕೊಂಡು ನಿಯಮಿತ ಅಧ್ಯಯನ, ಸಮಯದ ಸದ್ಬಳಕೆ ಮತ್ತು ಆತ್ಮವಿಶ್ವಾಸದೊಂದಿಗೆ ಸಿದ್ಧತೆ ನಡೆಸಬೇಕು ಎಂದು ಅವರು ಕರೆ ನೀಡಿದರು. ಪೋಷಕರು ಮಕ್ಕಳಿಗೆ ನಿರಂತರ ಪ್ರೋತ್ಸಾಹ ಮತ್ತು ಸೂಕ್ತ ಮಾರ್ಗದರ್ಶನ ನೀಡುವ ಅಗತ್ಯವನ್ನೂ ಅವರು ಒತ್ತಿ ಹೇಳಿದರು.

ಕಾಲೇಜಿನ ಪ್ರಾಂಶುಪಾಲರಾದ ಶೋಭಾ ಬೊಮ್ಮೆಟ್ಟಿ ಅವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ರೋಟರಿ ಕ್ಲಬ್ ಖಜಾಂಚಿ ರೊ. ಮಧುಸೂದನ್ ಕೆ. ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ದುರ್ಗಶ್ರೀ ಮತ್ತು ತಂಡ ಪ್ರಾರ್ಥನೆ ನೆರವೇರಿಸಿದರು. ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅಪೂರ್ವ ಗೋಕುಲದಾಸ್ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕರಾದ ವೋಮನ್ ದಾಸ ಆರ್.ಎ. ವಂದಿಸಿದರು.

ಕಾರ್ಯಕ್ರಮದಲ್ಲಿ ಪಿಯುಸಿ ವಿದ್ಯಾರ್ಥಿಗಳು, ಪೋಷಕರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading