ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬೃಹತ್ ಹೆದ್ದಾರಿ ಸ್ವಚ್ಛತಾ ಅಭಿಯಾನ

ಸುಬ್ರಹ್ಮಣ್ಯ ಜುಲೈ 04: ಕರ್ನಾಟಕ ಸರಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ಕಡಬ ತಾಲೂಕು ಪಂಚಾಯತ್ ಹಾಗೂ ಮಹಾತ್ಮ ಗಾಂಧಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಶನಿವಾರ ಸುಬ್ರಹ್ಮಣ್ಯದ ಕಾಶಿಕಟ್ಟೆಯಿಂದ ಮುಖ್ಯ ರಸ್ತೆಯಾಗಿ ಕುಮಾರಧಾರ, ಕುಲ್ಕುಂದ, ವೆಂಕಟಪುರದವರೆಗೆ ಬೃಹತ್ ಹೆದ್ದಾರಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ಕೈಗೊಳ್ಳಲಾಯಿತು.

. . . . . . . . .

ಕಾರ್ಯಕ್ರಮಕೆ ಚಾಲನೆ ನೀಡಿದ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಶ್ರೀಕಾಂತ್ ಅವರು ಮಾತನಾಡಿ “ಈ ಪ್ರಕೃತಿಯ ನಮಗೆ ಸ್ವಚ್ಛಂದವಾದ ಗಾಳಿ, ಶುದ್ಧವಾದ ಕುಡಿಯುವ ನೀರು ಹಾಗೂ ಫಲವತ್ತಾದ ಭೂಮಿಯನ್ನು ನೀಡಿದೆ. ಇದನ್ನು ಉಳಿಸಿ ಪೋಷಿಸುವ ಕೆಲಸ ನಮ್ಮದಾಗಬೇಕು. ಆ ನಿಟ್ಟಿನಲ್ಲಿ ಎಲ್ಲರೂ ತಮ್ಮ ತಮ್ಮ ಮನೆಯ ಪರಿಸರ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸಗಳನ್ನು ಎಸೆಯದಿರುವುದು ಹಾಗೂ ಎಲ್ಲಿಂದರಲ್ಲಿ ಕಸ ಎಸೆಯುವವರಿಗೆ ಜಾಗೃತಿಯನ್ನು ಮೂಡಿಸುವಂತಹ ಕೆಲಸವನ್ನು ನಾವೆಲ್ಲರೂ ಮಾಡಬೇಕಾಗಿದೆ. ಹಾಗೆ ನಾವು ಕಸವನ್ನು ಎಲ್ಲೆಂದರಲ್ಲಿ ಹಾಕುವುದಿಲ್ಲ ಹಾಗೂ ಕಸ ಎಲ್ಲೆಂದರಲ್ಲಿ ಹಾಕುವವರಿಗೆ ದಂಡನೆ ವಿಧಿಸುವುದರೊಂದಿಗೆ ಜಾಗೃತಿಯನ್ನು ಕೂಡ ಮೂಡಿಸುವ ಕೆಲಸವನ್ನು ನಾವು ಮಾಡುತ್ತೇವೆ ಎಂದು ಪ್ರತಿಜ್ಞೆಯನ್ನು ಕೈಗೊಳ್ಳೋಣ” ಎಂದರು. ನಿವೃತ್ತ ಉಪನ್ಯಾಸಕ ವಿಶ್ವನಾಥ ನಡುತೋಟ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. 

. . . . . . .

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೇಶ್, ಕಾರ್ಯದರ್ಶಿ ಮೋನಪ್ಪ, ಗಿರಿಧರಸ್ಕಂದ, ಪ್ರಶಾಂತ್,ಡಾ.ರವಿ ಕಕ್ಕೆಪದವು, ಸುಬ್ರಹ್ಮಣ್ಯ ಗೌಡ ಅತ್ಯಾಡಿ, ರಾಧಾಕೃಷ್ಣ ಯೇನೆಕಲ್ಲು, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು ಸದಸ್ಯರುಗಳು, ಶಿಕ್ಷಕರು, ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು, ಕುಮಾರಸ್ವಾಮಿ ವಿದ್ಯಾಲಯ ಹಾಗೂ ಎಸ್.ಎಸ್.ಪಿ.ಯು ಕಾಲೇಜಿನ ವಿದ್ಯಾರ್ಥಿಗಳು, ಓಂ ಶ್ರೀ ಸಂಜೀವಿನಿ ಸ್ವ-ಸಹಾಯ ಸಂಘದ ಸದಸ್ಯರುಗಳು ಅಭಿಯಾನದಲ್ಲಿ ಪಾಲ್ಗೊಂಡಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading