ಜು. 11ರಂದು ರಾಷ್ಟ್ರವ್ಯಾಪಿ ಲೋಕ ಅದಾಲತ್: ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶ

ಸುಳ್ಯ, ಜು. 4: ರಾಷ್ಟ್ರಾದ್ಯಂತ ಜು. 11ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ನ್ಯಾಯಾಲಯಗಳಲ್ಲಿ ಬಾಕಿ ಇರುವ ಹಾಗೂ ವ್ಯಾಜ್ಯ ಪೂರ್ವ ಹಂತದಲ್ಲಿರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಶೀಘ್ರವಾಗಿ ಇತ್ಯರ್ಥಗೊಳಿಸುವುದೇ ಇದರ ಮುಖ್ಯ ಉದ್ದೇಶವಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸುಳ್ಯ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶೆ ದಮಯಂತಿ ಸೋಮಯ್ಯ ತಿಳಿಸಿದರು.

. . . . . . . . .

ಅವರು ಜು. 4ರಂದು ಸುಳ್ಯ ನ್ಯಾಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜಿ ಸಂಧಾನದ ಮೂಲಕ ನ್ಯಾಯಾಲಯದಲ್ಲಿರುವ ಅಥವಾ ವ್ಯಾಜ್ಯ ಪೂರ್ವ ಹಂತದಲ್ಲಿರುವ ವಿವಾದಗಳನ್ನು ಲೋಕ ಅದಾಲತ್‌ನಲ್ಲಿ ಇತ್ಯರ್ಥಪಡಿಸಿಕೊಳ್ಳಲು ಅವಕಾಶವಿದ್ದು, ಇದರಿಂದ ಎರಡೂ ಪಕ್ಷಗಳಿಗೆ ನ್ಯಾಯ ದೊರೆಯುತ್ತದೆ ಎಂದು ಹೇಳಿದರು. ಲೋಕ ಅದಾಲತ್‌ನಲ್ಲಿ ಇತ್ಯರ್ಥಗೊಂಡ ಪ್ರಕರಣಗಳಿಗೆ ನ್ಯಾಯಾಲಯ ಶುಲ್ಕವಾಗಿ ಪಾವತಿಸಿದ ಮೊತ್ತವನ್ನು ಮರುಪಾವತಿಸಲಾಗುತ್ತದೆ ಎಂದರು.

. . . . . . .

ಸಮಾಜಘಾತುಕ ಅಪರಾಧಗಳನ್ನು ಹೊರತುಪಡಿಸಿ ಬ್ಯಾಂಕ್ ಸಾಲ ಮರುಪಾವತಿ, ಕೌಟುಂಬಿಕ ವಿವಾದಗಳು, ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು, ಭೂಸ್ವಾಧೀನ ಹಾಗೂ ಕಾರ್ಮಿಕ ವಿವಾದಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದಾಗಿದೆ. ಇದರಿಂದ ಸಮಯ ಮತ್ತು ವೆಚ್ಚ ಉಳಿತಾಯವಾಗುವುದರ ಜೊತೆಗೆ ಪರಸ್ಪರ ಬಾಂಧವ್ಯವೂ ಗಟ್ಟಿಯಾಗುತ್ತದೆ ಎಂದು ತಿಳಿಸಿದರು.

ಪ್ರಧಾನ ಸಿವಿಲ್ ನ್ಯಾಯಾಧೀಶ ಚಿರಾಗ್ ಸಿ. ಮಾತನಾಡಿ, ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದ ದಂಡ ಪಾವತಿಯಲ್ಲಿ ಲೋಕ ಅದಾಲತ್ ಸಂದರ್ಭದಲ್ಲಿ ಶೇ. 50ರಷ್ಟು ರಿಯಾಯಿತಿ ನೀಡಲಾಗುತ್ತದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಸುಕುಮಾರ್ ಕೊಡ್ತುಗುಳಿ ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading