ಸುಳ್ಯ: ಯು.ಟಿ. ಖಾದರ್ ಗೆ ಸಾರ್ವಜನಿಕ ಸನ್ಮಾನ | ಜನರ ಪ್ರೀತಿ ಮತ್ತು ಪ್ರೋತ್ಸಾಹವೇ ದೊಡ್ಡ ಶಕ್ತಿ; ಸಚಿವ ಯು.ಟಿ. ಖಾದರ್

ಸುಳ್ಯ, ಜು. 6: ಅಧಿಕಾರ ಎಂಬುದು ಕೇವಲ ಒಂದು ಹುದ್ದೆಯಲ್ಲ; ಅದು ಲಕ್ಷಾಂತರ ಜನರ ಅಪೇಕ್ಷೆ, ಆಶಯ ಹಾಗೂ ಕನಸುಗಳ ಜವಾಬ್ದಾರಿಯನ್ನು ಹೊತ್ತುಕೊಳ್ಳುವ ಸ್ಥಾನವಾಗಿದೆ. ಜನಸಾಮಾನ್ಯರು ನೀಡುವ ಪ್ರೀತಿ ಮತ್ತು ಪ್ರೋತ್ಸಾಹವೇ ದೊಡ್ಡ ಮಟ್ಟದ ಶಕ್ತಿ ಎಂದು ಕರ್ನಾಟಕ ಸರ್ಕಾರದ ಆರೋಗ್ಯ, ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಫರೀದ್ ಹೇಳಿದರು.

. . . . . . . . .

ಅವರು ಜು. 6ರಂದು ಸುಳ್ಯದ ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ನಡೆದ ಸಾರ್ವಜನಿಕ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.

. . . . . . .

“ಎಲ್ಲರೂ ಒಗ್ಗಟ್ಟಿನಿಂದ ತಮ್ಮ ಬೇಡಿಕೆಗಳನ್ನು ಮುಂದಿಟ್ಟಿದ್ದೀರಿ. ಉತ್ತಮ ಮನಸ್ಸಿನಿಂದ ಎಲ್ಲರೂ ಒಂದಾಗಿ ಕೆಲಸಕ್ಕೆ ಇಳಿದಾಗ ಯಶಸ್ಸು ತನ್ನಿಂದ ತಾನೇ ದೊರೆಯುತ್ತದೆ,” ಎಂದು ಅವರು ಹೇಳಿದರು.

ಕಾರ್ಯಕ್ರಮವನ್ನು ಸುಬ್ರಹ್ಮಣ್ಯ ಸಂಪುಟ ನರಸಿಂಹಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಸೇರಿದಂತೆ ಗಣ್ಯರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಸಚಿವ ಯು.ಟಿ. ಖಾದರ್ ಹಾಗೂ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅಡಿಕೆ ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕಿ ಭಾಗೀರಥಿ ಮುರುಳ್ಯ, ಸುಳ್ಯದ ಕೃಷಿಕರಿಗೆ ಕಾಡುಪ್ರಾಣಿಗಳ ಹಾವಳಿಯಿಂದ ರಕ್ಷಣೆ ಪಡೆಯಲು ಅಗತ್ಯವಿರುವ ಕೋವಿ ಪರವಾನಗಿ ವ್ಯವಸ್ಥೆಯನ್ನು ಸರಳಗೊಳಿಸಿ ಅನುಕೂಲ ಮಾಡಿಕೊಡಬೇಕು ಎಂದು ಸಚಿವರಲ್ಲಿ ಆಗ್ರಹಿಸಿದರು.

ಅಲ್ಲದೆ, ಮಳೆ ಹಾಗೂ ಪ್ರಕೃತಿ ವಿಕೋಪಗಳಿಗೆ ಸಂಬಂಧಿಸಿದ ಅನುದಾನ ಬಿಡುಗಡೆ ವೇಳೆ ಸಚಿವರ ಹೆಸರಿನೊಂದಿಗೆ ಸ್ಥಳೀಯ ಶಾಸಕರ ಹೆಸರನ್ನೂ ಸೇರಿಸಬೇಕು ಎಂದು ಮನವಿ ಮಾಡಿದ ಅವರು, ಶಾಲೆಗಳು ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ಕಟ್ಟಡ ನಿರ್ಮಾಣ ಮತ್ತು ಅಭಿವೃದ್ಧಿಗೆ ಹೆಚ್ಚಿನ ವಿಶೇಷ ಅನುದಾನ ಮಂಜೂರು ಮಾಡುವಂತೆ ಕೋರಿದರು.

ಕಾರ್ಯಕ್ರಮದಲ್ಲಿ ಹಲವಾರು ಸಾರ್ವಜನಿಕರು ಸಚಿವರಿಗೆ ಮನವಿ ನೀಡಿದರು. ಯಶಸ್ವಿ ಕಾರ್ಯಕ್ರಮದಲ್ಲಿ ಎಲ್ಲಾ ಪಕ್ಷದ ಮುಖಂಡರು ಕಾರ್ಯಕರ್ತರು ಉದ್ಯಮಿಗಳು ಅಭಿಮಾನಿಗಳು ಸಾರ್ವಜನಿಕರು ನೂರಾರು ಸಂಖ್ಯೆಯಲ್ಲಿ ಆಗಮಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಪೇರಡ್ಕ-ಗೂನಡ್ಕ ಜುಮಾ ಮಸೀದಿಯ ಖತೀಬ ಅಹಮ್ಮದ್ ನಈಮ್ ಮುಅಬರಿ ಫೈಝಿ ಹಾಗೂ ಗುತ್ತಿಗಾರು ಸೈಂಟ್ ಮೇರೀಸ್ ಚರ್ಚ್‌ನ ಧರ್ಮಗುರು ರೆ. ಫಾ. ಥೋಮಸ್ ಪಾರೆಕ್ಕಾಟಿಲ್, ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಹೀದ್, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.), ಸುಳ್ಯ ಕಮಿಟಿ ‘ಎ’ ಅಧ್ಯಕ್ಷ ಡಾ. ರೇಣುಕಾಪ್ರಸಾದ್ ಕೆ.ವಿ., ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ, ಕುಕ್ಕೆ ಸುಬ್ರಹ್ಮಣ್ಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ, ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಕೆ. ಸೀತಾರಾಮ ರೈ, ಉದ್ಯಮಿ ಜಿ. ಕೃಷ್ಣಪ್ಪ, ಲಯನ್ಸ್‌ನ ಜಿಲ್ಲಾ ಮಾಜಿ ರಾಜ್ಯಪಾಲ ಎಂ. ಸದಾಶಿವ, ಅರಂಬೂರು ಕರ್ನಾಟಕ ಪ್ಲೈವುಡ್‌ನ ಮಾಲಕ ಕೆ. ಕೃಷ್ಣ ಕಾಮತ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಎಸ್.ಎನ್. ಮನ್ಮಥ ಹಾಗೂ ಸುದ್ದಿ ಸಮೂಹ ಸಂಸ್ಥೆಯ ಮಾಲಕ ಡಾ. ಯು.ಪಿ. ಶಿವಾನಂದ ಉಪಸ್ಥಿತರಿದ್ದರು.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಸ್ವಾಗತಿಸಿದರು. ಸುಳ್ಯ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ವಂದಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಗೌಡ ಸಂಘದ ಪ್ರಧಾನ ಕಾರ್ಯದರ್ಶಿ ದಿನೇಶ್ ಮಡಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading