
ಐವರ್ನಾಡಿನಲ್ಲಿ ಶ್ರೀ ಪಂಚಲಿಂಗೇಶ್ವರ ಎಂಟರ್ ಪ್ರೈಸಸ್ ನವರ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕನ್ನು ಆ. 24 ರಂದು ಶಾಸಕ ಎಸ್ ಅಂಗಾರ ಉದ್ಘಾಟಿಸಿದರು. ಜಿ.ಪಂ.ಸದಸ್ಯರಾದ ಎಸ್ ಎನ್ ಮನ್ಮಥ, ಪುಷ್ಪಾವತಿ ಬಾಳಿಲ, ತಾ.ಪಂ.ಸದಸ್ಯ ರಾಧಾಕೃಷ್ಣ ಬೊಳ್ಳೂರು, ಜೇನು ಸಹಕಾರಿ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರು, ಐವರ್ನಾಡಿನ ವೈದ್ಯರಾದ ಡಾ.ಬಾಲಸುಬ್ರಹ್ಮಣ್ಯ ಭಟ್, ಯುವಶಕ್ತಿ ಸಂಘದ ಗೌರವಾಧ್ಯಕ್ಷ ದಿನೇಶ್ ಮಡ್ತಿಲ, ಪಿಡಿಓ ಯು.ಡಿ.ಶೇಖರ ಹಾಗೂ ಊರವರು ಉಪಸ್ಥಿತರಿದ್ದರು. ಸಂಸ್ಥೆಯ ಮಾಲಕರಾದ ಶ್ರೀನಿವಾಸ ಮಡ್ತಿಲ ಸ್ವಾಗತಿಸಿದರು.