ಸುಳ್ಯ: ಪತ್ರಿಕಾ ದಿನಾಚರಣೆ : ಸಮಾಜ ಕಟ್ಟುವ ಶಕ್ತಿಯಾಗಿ ಪತ್ರಿಕೆಗಳು ಬೆಳೆಯಬೇಕು – ಪ್ರಭಾತ್ ಬಲ್ನಾಡು – ಅಂಕಣಕಾರ ಡಾ. ಸುಂದರ ಕೇನಾಜೆ ಅವರಿಗೆ ಸನ್ಮಾನ

ಸುಳ್ಯ, ಜು. 7: ಪತ್ರಕರ್ತರು ನೀಡುವ ಮಾಹಿತಿ ಹಾಗೂ ಲೇಖನಗಳು ಯಾವುದೇ ಸಂಶೋಧಕರ ಅಧ್ಯಯನಕ್ಕೂ ಕಡಿಮೆಯಲ್ಲ. ಇತ್ತೀಚಿನ ದಿನಗಳಲ್ಲಿ ಪತ್ರಿಕೆಗಳು ಜನಮಾನಸದಿಂದ ದೂರವಾಗುತ್ತಿದ್ದು, ಪತ್ರಿಕೆ ಓದುವ ಅಭಿರುಚಿಯನ್ನು ಹೆಚ್ಚಿಸಲು ಶಾಲಾ ಹಂತದಿಂದಲೇ ಸಮಾಜದಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆಯಬೇಕಿದೆ ಎಂದು ಮೂಡಬಿದಿರೆಯ ಜೈನ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಭಾತ್ ಬಲ್ನಾಡು ಹೇಳಿದರು.

. . . . . . . . .

ಅವರು ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ (ರಿ.) ವತಿಯಿಂದ ಜು. 7 ರಂದು ಅಂಬಟೆಡ್ಕದ ಕನ್ನಡ ಭವನದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

. . . . . . .

ಸಮಾಜದಲ್ಲಿ ಶಿಕ್ಷಕರಿಗೆ ದೊರೆಯುವ ಗೌರವ ಪತ್ರಕರ್ತರಿಗೂ ಲಭಿಸುತ್ತದೆ. ಪತ್ರಿಕೋದ್ಯಮದಲ್ಲಿ ಆತ್ಮತೃಪ್ತಿ ಅಡಗಿದ್ದು, ಮುದ್ರಣ ಮಾಧ್ಯಮ ತನ್ನ ಘನತೆಯನ್ನು ಇಂದಿಗೂ ಉಳಿಸಿಕೊಂಡಿದೆ. ಸಮಾಜವನ್ನು ಕಟ್ಟುವ ಶಕ್ತಿಯಾಗಿ ಪತ್ರಿಕೆಗಳು ಬೆಳೆಯಬೇಕು. ಅಧಿಕಾರಿಗಳು ಪತ್ರಿಕೆಗಳಿಗೆ ಹೆದರುವಷ್ಟು ಬೇರಾವುದಕ್ಕೂ ಹೆದರುವುದಿಲ್ಲ. ಆ ಭಯವನ್ನು ಸಮಾಜಮುಖಿ ಕಾರ್ಯಗಳಿಗೆ ಬಳಸಿಕೊಳ್ಳಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಕೆವಿಜಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಲೀಲಾಧರ್ ಡಿ.ವಿ. ಮಾತನಾಡಿ, ಸಮಾಜದ ಹಿತದೃಷ್ಟಿಯಿಂದ ಉತ್ತಮ ಕಾರ್ಯಕ್ರಮಗಳನ್ನು ಪತ್ರಕರ್ತರು ಆಯೋಜಿಸುತ್ತಿದ್ದಾರೆ. ಪತ್ರಿಕೋದ್ಯಮ ಗೌರವಯುತ ವೃತ್ತಿಯಾಗಿದ್ದು, ವಿದ್ಯಾರ್ಥಿಗಳಿಗೆ ಅದರ ಮಹತ್ವದ ಬಗ್ಗೆ ಅರಿವು ಮೂಡಿಸುವ ಅಗತ್ಯವಿದೆ ಎಂದು ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ.), ಬೆಂಗಳೂರಿನ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ಮಾತನಾಡಿ, ಪತ್ರಕರ್ತರ ಸಂಘಟನೆಗಳ ಮೂಲಕ ಗ್ರಾಮಗಳ ಅಭಿವೃದ್ಧಿಗೂ ಸಹಕಾರಿಯಾಗಬಹುದು. ವಿದ್ಯಾರ್ಥಿಗಳು ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಪತ್ರಿಕೆ ಜ್ಞಾನದ ಆಗರವಾಗಿದ್ದು, ಅದನ್ನು ಪ್ರತಿಯೊಬ್ಬರೂ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಲೇಖಕ ಹಾಗೂ ಅಂಕಣಕಾರ ಡಾ. ಸುಂದರ ಕೇನಾಜೆ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಲೋಕೇಶ್ ಪೆರ್ಲಂಪಾಡಿ ಅಧ್ಯಕ್ಷತೆ ವಹಿಸಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್., ಪ್ರಧಾನ ಕಾರ್ಯದರ್ಶಿ ರಾಜೇಶ್ ಕೆ. ಪೂಜಾರಿ, ನಿರ್ದೇಶಕ ಗಿರೀಶ್ ಅಡ್ವಂಗಾಯ, ಪ್ರೆಸ್ ಕ್ಲಬ್ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ, ಕೋಶಾಧಿಕಾರಿ ಜಯಪ್ರಕಾಶ್ ಕುಕ್ಕೇಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಗಂಗಾಧರ ಕಲ್ಲಪಳ್ಳಿ ಸ್ವಾಗತಿಸಿ, ಮಿಥುನ್ ಕರ್ಲಪ್ಪಾಡಿ ವಂದಿಸಿ, ಪೂಜಾಶ್ರೀ ಕಾರ್ಯಕ್ರಮ ನಿರೂಪಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading