ಶಾರದ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ಪ್ರಸನ್ನ ಎನ್.ಎಚ್ ಅವರಿಗೆ ಬೀಳ್ಕೊಡುಗೆ

ಸುಳ್ಯ: ಸುಳ್ಯ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಪ್ರಸನ್ನ ಎನ್.ಹೆಚ್ ಅವರಿಗೆ ಬೀಳ್ಕೊಡುಗೆ ಸಮಾರಂಭವ ಜು. 4ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

. . . . . . . . .

ಕಾಲೇಜಿನ ಆಡಳಿತ ಮಂಡಳಿ ದ.ಕ ಗೌಡ ವಿದ್ಯಾ ಸಂಘ, ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ಮತ್ತು ಶ್ರೀ ಶಾರದಾ ಪ್ರೌಢಶಾಲೆಯ ವತಿಯಿಂದ ಸಮಾರಂಭವನ್ನು ಆಯೋಜಿಸಲಾಯಿತು.
ದ.ಕ. ಗೌಡ ವಿದ್ಯಾ ಸಂಘದ ಅಧ್ಯಕ್ಷ ಧನಂಜಯ್ ಅಡ್ಪಂಗಾಯ ಅವರ ಅಧ್ಯಕ್ಷತೆಯಲ್ಲಿ ನಡೆದ  ಸಮಾರಂಭದಲ್ಲಿ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಕೆ.ಸಿ. ಸದಾನಂದ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಅಧ್ಯಕ್ಷ ಧನಂಜಯ ಅಢ್ಪಂಗಾಯ, ಪ್ರಧಾನ ಕಾರ್ಯದರ್ಶಿ ಡಾ. ರೇವತಿ ನಂದನ್ ಮತ್ತು ಪ್ರಸನ್ನ ಎನ್.ಹೆಚ್. ಹಾಗೂ ಅವರ ಪತ್ನಿ ರವಿಶ್ರೀ ಅವರನ್ನು ಸನ್ಮಾನಿಸಿದರು.
ಬಳಿಕ ಮಾತನಾಡಿದ, ಪ್ರಸನ್ನ ಎನ್.ಹೆಚ್. ಅವರು ಉಪನ್ಯಾಸಕರಾಗಿ ತಮ್ಮ ಪ್ರಸನ್ನ ಚಿತ್ತತೆಯಿಂದ ವಿದ್ಯಾರ್ಥಿಗಳ ಏಳಿಗೆಗೆ ಮತ್ತು ಸಂಸ್ಥೆಯ ಏಳಿಗೆಗಾಗಿ ತೊಡಗಿಸಿಕೊಂಡಿರುವ ಬಗೆಯನ್ನು ಶ್ಲಾಘಿಸಿದರು. ಸಂಸ್ಥೆಯ ನೂತನ ಕಟ್ಟಡಕ್ಕೆ ಒಂದು ಲಕ್ಷ ರೂಪಾಯಿಯನ್ನು ದೇಣಿಗೆಯಾಗಿ ಕೊಟ್ಟಿರುವುದನ್ನು ಸ್ಮರಿಸಿಕೊಂಡರು.
ಗೌಡ ವಿದ್ಯಾಸಂಘದ ನಿರ್ದೇಶಕ ಜಯರಾಮ್ ಚಿಲ್ತಾಡ್ಕ, ಡಾ. ಸಾಯಿ ಗೀತಾ, ಉಮೇಶ್ ಮಳವೇಲು, ಪ್ರೌಢಶಾಲೆಯ ಮುಖ್ಯೋಪಾಧ್ಯಾಯನಿ ಭಾರತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ನಿವೃತ್ತ ಪ್ರಾಂಶುಪಾಲೆ ದಯಾಮಣಿ ಅಭಿನಂದನಾ ಭಾಷಣವನ್ನು ಮಾಡಿದರು. ಆಂಗ್ಲ ಭಾಷಾ ಉಪನ್ಯಾಸಕಿ ಸ್ವಾತಿ ಅಭಿನಂದನಾ ಪತ್ರ ವಾಚಿಸಿದರು.
ಸನ್ಮಾನಕ್ಕೆ ಉತ್ತರಿಸಿದ ಪ್ರಸನ್ನ ಅವರು ಆಡಳಿತ ಮಂಡಳಿ  ಪ್ರಾಂಶುಪಾಲರು, ಉಪನ್ಯಾಸಕ ವರ್ಗದವರು ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ನೀಡಿದ ಸಹಕಾರವನ್ನು ಸ್ಮರಿಸಿಕೊಂಡರು.
ಅತಿಥಿಗಳು, ಬಂಧು ಮಿತ್ರರು, ಕಾಲೇಜಿನ ಉಪನ್ಯಾಸಕರುಗಳು, ವಿದ್ಯಾರ್ಥಿಗಳು, ಹಿರಿಯ ವಿದ್ಯಾರ್ಥಿಗಳು ಶುಭ ಹಾರೈಸಿದರು.

. . . . . . .

ಶಾರದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಸ್ವರ್ಣಕಲಾ ಎ.ಎಸ್., ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿ, ಕನ್ನಡ ಉಪನ್ಯಾಸಕಿ ಗಾಯತ್ರಿ ವಂದಿಸಿ, ರಾಜ್ಯಶಾಸ್ತ್ರ ಉಪನ್ಯಾಸಕಿ ದಾಮೋದರ ಎನ್. ಕಾರ್ಯಕ್ರಮ ನಿರೂಪಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading