ಸುಬ್ರಹ್ಮಣ್ಯ : ಲಾಡ್ಜ್ ನಲ್ಲಿ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ

ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯದ ಖಾಸಗಿ ಲಾಡ್ಜ್‌ನಲ್ಲಿ ತಂಗಿದ್ದ ರಾಮನಗರ ಜಿಲ್ಲೆಯ 30 ವರ್ಷದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ರಾಮನಗರ ಜಿಲ್ಲೆಯ ಕೈಲಂಜ ಹೋಬಳಿ, ಕೆ.ಪಿ.ದೊಡ್ಡ ಅಂಚೆ, ಉಚ್ಚಮ್ಮನದೊಡ್ಡಿ ನಿವಾಸಿ ಮಧು.ಎಸ್(30) ಎಂದು ಗುರುತಿಸಲಾಗಿದೆ.

. . . . . . . . .

ಪೊಲೀಸರ ಮಾಹಿತಿ ಪ್ರಕಾರ, ಮಧು ಅವರು ಜುಲೈ 8ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ದರ್ಶನಕ್ಕಾಗಿ ಬಂದು ಅಜ್ಜಿಹಿತ್ಲು ಪ್ರದೇಶದ ಸುಬ್ರಾಯ ಲಾಡ್ಜ್‌ನಲ್ಲಿ ಕೊಠಡಿ ಬಾಡಿಗೆಗೆ ಪಡೆದಿದ್ದರು. ಸಂಜೆ ದೇವಸ್ಥಾನಕ್ಕೆ ತೆರಳಿ ಬಳಿಕ ಲಾಡ್ಜ್‌ಗೆ ಮರಳಿದ್ದು, ರಾತ್ರಿ ಅಲ್ಲಿಯೇ ತಂಗಿದ್ದರು. ಜುಲೈ 09ರಂದು ಮಧ್ಯಾಹ್ನ ಕೊಠಡಿ ಖಾಲಿ ಮಾಡಬೇಕಿದ್ದರೂ ಹೊರಗೆ ಬಾರದೆ ಇದ್ದ ಹಿನ್ನೆಲೆಯಲ್ಲಿ ಸಂಜೆ ಸುಮಾರು 4:00 ಗಂಟೆಗೆ ಲಾಡ್ಜ್ ಸಿಬ್ಬಂದಿ ಬಾಗಿಲು ತೆರೆಯಲು ಸೂಚಿಸಿದ್ದಾರೆ. ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬಾರದ ಕಾರಣ ಕಿಟಕಿಯಿಂದ ಪರಿಶೀಲಿಸಿದಾಗ, ಕೊಠಡಿಯೊಳಗೆ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಮಧು ಅವರ ಮೃತದೇಹ ಪತ್ತೆಯಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸುಬ್ರಹ್ಮಣ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಅಸ್ವಾಭಾವಿಕ ಸಾವು(ಯುಡಿಆರ್) ಪ್ರಕರಣ ದಾಖಲಿಸಿಕೊಂಡು, ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿಸಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading