ಕುಕ್ಕೆ ಸುಬ್ರಹ್ಮಣ್ಯ ಪೊಲೀಸ್ ಠಾಣೆ ಹಾಗೂ ಕುಮಾರಸ್ವಾಮಿ ವಿದ್ಯಾಲಯದ ಸಹಯೋಗದಲ್ಲಿ ಸಾಮಾನ್ಯ ಜ್ಞಾನ ಪರೀಕ್ಷೆ ಯಶಸ್ವಿ

ಸುಬ್ರಹ್ಮಣ್ಯ, ಜುಲೈ 19 : ಪೊಲೀಸ್ ಇಲಾಖೆಗೆ ಸೇರಲು ಆಸಕ್ತಿ ಹೊಂದಿರುವ ಯುವಜನರಿಗೆ ಮಾರ್ಗದರ್ಶನ ನೀಡುವ ಉದ್ದೇಶದಿಂದ ಕುಕ್ಕೆ ಸುಬ್ರಹ್ಮಣ್ಯ ಪೊಲೀಸ್ ಠಾಣೆ ಹಾಗೂ ಕುಮಾರಸ್ವಾಮಿ ವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಆಯೋಜಿಸಲಾದ ಸಾಮಾನ್ಯ ಜ್ಞಾನ ಪರೀಕ್ಷೆ ಯಶಸ್ವಿಯಾಗಿ ನಡೆಯಿತು.

. . . . . . . . .

ಕಾರ್ಯಕ್ರಮವನ್ನು ಕುಕ್ಕೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಠಾಣಾಧಿಕಾರಿ ಆಂಜನೇಯ ರೆಡ್ಡಿ ಉದ್ಘಾಟಿಸಿ ಮಾತನಾಡಿ, “ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಲು ಸಾಮಾನ್ಯ ಜ್ಞಾನದ ಜೊತೆಗೆ ದೈಹಿಕ ಸಾಮರ್ಥ್ಯ, ಶಿಸ್ತು, ಆತ್ಮವಿಶ್ವಾಸ ಹಾಗೂ ನಿರಂತರ ಅಭ್ಯಾಸ ಅತ್ಯಗತ್ಯವಾಗಿದೆ” ಎಂದು ಹೇಳಿದರು. “ಇಂತಹ ಪರೀಕ್ಷೆಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗುತ್ತಿರುವ ಅಭ್ಯರ್ಥಿಗಳಿಗೆ ಉತ್ತಮ ವೇದಿಕೆಯಾಗಿದ್ದು, ಆತ್ಮವಿಶ್ವಾಸವನ್ನು ವೃದ್ಧಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ” ಎಂದು ತಿಳಿಸಿದರು.

. . . . . . .

ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ವಿದ್ಯಾಲಯದ ಅಧ್ಯಕ್ಷರಾದ ಗಣೇಶ್ ಪ್ರಸಾದ್ ನಾಯರ್, ಸಂಚಾಲಕರಾದ ಚಂದ್ರಶೇಖರ್ ನಾಯರ್, ಉಪಾಧ್ಯಕ್ಷರಾದ ಶಿವರಾಮ್ ಏನೆಕಲ್, ಸಂಸ್ಥೆಯ ಪ್ರಾಂಶುಪಾಲರಾದ ಡಾ. ಸಂಕೀರ್ತ್ ಹೆಬ್ಬಾರ್ ಹಾಗೂ ಮುಖ್ಯ ಶಿಕ್ಷಕಿ ವಿದ್ಯಾರತ್ನ.ಎಚ್ ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಪರೀಕ್ಷೆಯಲ್ಲಿ ಸುಮಾರು 400ಕ್ಕೂ ಅಧಿಕ ಅಭ್ಯರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಸಾಮಾನ್ಯ ಜ್ಞಾನವನ್ನು ಪರೀಕ್ಷಿಸಿಕೊಂಡರು. ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಅಭ್ಯರ್ಥಿಗಳು ಈ ಪರೀಕ್ಷೆಯಲ್ಲಿ ಭಾಗವಹಿಸಿದ್ದು, ಸುಬ್ರಹ್ಮಣ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಯುವಕ-ಯುವತಿಯರೂ ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗಿ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಯಶಸ್ವಿ ಆಯೋಜನೆಗೆ ಕುಕ್ಕೆ ಸುಬ್ರಹ್ಮಣ್ಯ ಪೊಲೀಸ್ ಇಲಾಖೆ ಹಾಗೂ ಕುಮಾರಸ್ವಾಮಿ ವಿದ್ಯಾಲಯದ ಆಡಳಿತ ಮಂಡಳಿ ಶ್ರಮವಹಿಸಿತು. ಸಂಸ್ಥೆಯ ಎಲ್ಲಾ ಅಧ್ಯಾಪಕರು, ಉಪನ್ಯಾಸಕರು, ಶಿಕ್ಷಕರು ಹಾಗೂ ಸಿಬ್ಬಂದಿ ಕಾರ್ಯಕ್ರಮದ ಯಶಸ್ಸಿಗೆ ಸಕ್ರಿಯವಾಗಿ ಸಹಕರಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲಾ ಅಭ್ಯರ್ಥಿಗಳಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿತ್ತು. ಈ ಸಹಕಾರಕ್ಕಾಗಿ ದೇವಸ್ಥಾನದ ಆಡಳಿತ ಮಂಡಳಿಗೆ ಆಯೋಜಕರು ಕೃತಜ್ಞತೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಅಭ್ಯರ್ಥಿಗಳು ಹಾಗೂ ಯಶಸ್ವಿ ಆಯೋಜನೆಗೆ ಸಹಕರಿಸಿದ ಎಲ್ಲರಿಗೂ ಆಯೋಜಕರು ಅಭಿನಂದನೆ ಸಲ್ಲಿಸಿದರು. “ಇಂತಹ ಸಾಮಾನ್ಯ ಜ್ಞಾನ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳು ಯುವಜನರನ್ನು ಪೊಲೀಸ್ ನೇಮಕಾತಿ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಜ್ಜುಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸಲಿದ್ದು, ಮುಂದಿನ ದಿನಗಳಲ್ಲಿಯೂ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು” ಎಂದು ಆಯೋಜಕರು ತಿಳಿಸಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading