ಕುಮಾರಸ್ವಾಮಿ ವಿದ್ಯಾಲಯದಲ್ಲಿ ಮಾಹಿತಿ ಕಾರ್ಯಾಗಾರ

ಸುಬ್ರಹ್ಮಣ್ಯ, ಜು. 22: ಕುಮಾರಸ್ವಾಮಿ ವಿದ್ಯಾಲಯದಲ್ಲಿ iRisePro Academy for Human Excellence, ಬೆಂಗಳೂರು ವತಿಯಿಂದ 5ನೇ ತರಗತಿಯಿಂದ 12ನೇ ತರಗತಿಯ ವಿದ್ಯಾರ್ಥಿಗಳ ಪೋಷಕರಿಗಾಗಿ ವಿಶೇಷ ಮಾಹಿತಿ ಕಾರ್ಯಾಗಾರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಮಕ್ಕಳ ಸಮಗ್ರ ಬೆಳವಣಿಗೆ ಹಾಗೂ ಪೋಷಕರ ಜಾಗೃತಿಯನ್ನು ಕೇಂದ್ರವಾಗಿಟ್ಟುಕೊಂಡು ನಡೆದ ಈ ಕಾರ್ಯಕ್ರಮವು ಪೋಷಕರಿಂದ ಉತ್ತಮ ಸ್ಪಂದನೆ ಪಡೆಯಿತು.

. . . . . . . . .

ಕಾರ್ಯಾಗಾರದ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ iRisePro ಸಂಸ್ಥಾಪಕರಾದ ಶ್ರೀ ಕೃಷ್ಣರಾಜ್ ಎಂ.ಮಂಜುನಾಥ್, KAS ಅವರು ಮಕ್ಕಳ ಕಲಿಕಾ ಸಾಮರ್ಥ್ಯ ವೃದ್ಧಿ, ವ್ಯಕ್ತಿತ್ವ ವಿಕಸನ, ಆತ್ಮವಿಶ್ವಾಸ ಬೆಳೆಸುವಿಕೆ, ಭವಿಷ್ಯದ ವೃತ್ತಿ ಆಯ್ಕೆ, ಡಿಜಿಟಲ್ ಯುಗದಲ್ಲಿ ಮೊಬೈಲ್ ಬಳಕೆಯ ಪರಿಣಾಮಗಳು ಹಾಗೂ ಮಕ್ಕಳಿಗೆ ಸೂಕ್ತ ಮಾರ್ಗದರ್ಶನ ನೀಡುವಲ್ಲಿ ಪೋಷಕರ ಪಾತ್ರದ ಕುರಿತು ಸಮಗ್ರವಾಗಿ ಮಾಹಿತಿ ನೀಡಿದರು.

. . . . . . .

ಮಕ್ಕಳಲ್ಲಿರುವ ಸಹಜ ಪ್ರತಿಭೆಯನ್ನು ಗುರುತಿಸಿ, ಅವರ ಆಸಕ್ತಿ ಮತ್ತು ಸಾಮರ್ಥ್ಯಕ್ಕೆ ಅನುಗುಣವಾಗಿ ಪ್ರೋತ್ಸಾಹಿಸುವುದು, ಉತ್ತಮ ಮೌಲ್ಯಗಳನ್ನು ಬೆಳೆಸುವುದು, ಅವರೊಂದಿಗೆ ನಿರಂತರ ಸಂವಹನ ನಡೆಸುವುದು ಹಾಗೂ ಶೈಕ್ಷಣಿಕ ಸಾಧನೆಯ ಜೊತೆಗೆ ಜೀವನ ಕೌಶಲ್ಯಗಳಿಗೂ ಸಮಾನ ಆದ್ಯತೆ ನೀಡುವುದು ಇಂದಿನ ಪೋಷಕರ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಅವರು ತಿಳಿಸಿದರು.

ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಪೋಷಕರು ತಮ್ಮ ಸಂದೇಹಗಳಿಗೆ ಸ್ಪಷ್ಟನೆ ಪಡೆದು, ಮಕ್ಕಳ ಭವಿಷ್ಯದ ಶಿಕ್ಷಣ, ವ್ಯಕ್ತಿತ್ವ ನಿರ್ಮಾಣ ಹಾಗೂ ಜೀವನ ಕೌಶಲ್ಯಗಳ ಕುರಿತು ಅಮೂಲ್ಯ ಮಾಹಿತಿಯನ್ನು ಪಡೆದರು. ಈ ಕಾರ್ಯಾಗಾರವು ಪೋಷಕರಲ್ಲಿ ಹೊಸ ಅರಿವು, ಆತ್ಮವಿಶ್ವಾಸ ಹಾಗೂ ಮಕ್ಕಳ ಸಮಗ್ರ ಬೆಳವಣಿಗೆಯ ಕುರಿತು ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಯಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಗಣೇಶ್ ಪ್ರಸಾದ್, ಸಂಚಾಲಕರಾದ ಚಂದ್ರಶೇಖರ್ ನಾಯರ್, ಪ್ರಾಂಶುಪಾಲರಾದ ಡಾ. ಸಂಕೀರ್ತ್ ಹೆಬ್ಬಾರ್, ಮುಖ್ಯ ಶಿಕ್ಷಕಿ ವಿದ್ಯಾರತ್ನ, ಉಪನ್ಯಾಸಕರು, ಶಿಕ್ಷಕರು, ಸಿಬ್ಬಂದಿ ವರ್ಗ ಹಾಗೂ ಪೋಷಕರು ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಲಾಯಿತು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading