ರಸ್ತೆ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ದ.ಕ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ ; ಸಂಚಾರ ನಿಯಮ ಉಲ್ಲಂಘಿಸುವವರ ಮೇಲೆ ಕ್ಯಾಮೆರಾ ಕಣ್ಗಾವಲು – ನೋಟೀಸ್ ಜಾರಿ…!!

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಸಂಚಾರ ನಿಯಮಗಳ ಉಲ್ಲಂಘನೆಗಳಿಂದಾಗಿ ನಡೆಯುತ್ತಿರುವ ರಸ್ತೆ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಕೆ ಮಾಡಲು ಪ್ರಾರಂಭಿಸಲಾಗಿದ್ದು, ಮೊದಲ ಹಂತವಾಗಿ ವಿಟ್ಲ ಪೊಲೀಸ್ ಠಾಣೆ, ಉಪ್ಪಿನಂಗಡಿ ಪೊಲೀಸ್ ಠಾಣೆ, ಸುಳ್ಯ ಪೊಲೀಸ್ ಠಾಣೆ ಹಾಗೂ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಕೆ ಮಾಡಲಾಗಿದೆ. ಜುಲೈ 23ರಿಂದ ಕ್ಯಾಮೆರಾಗಳು ಕಾರ್ಯಾರಂಭಗೊಂಡಿದ್ದು, ಸದ್ರಿ ಸಿಸಿ ಕ್ಯಾಮೆರಾಗಳ ಮೂಲಕ ಸಂಚಾರ ನಿಯಮಗಳ ಉಲ್ಲಂಘನೆಗಳನ್ನು ಪತ್ತೆಮಾಡಿ ಸಂಬಂಧಪಟ್ಟ ವಾಹನ ಮಾಲೀಕರಿಗೆ ನೋಟೀಸ್ ನೀಡಲಾಗುತ್ತದೆ ಎಂದು ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ. ಸಂಚಾರ ನಿಯಮಗಳ ಉಲ್ಲಂಘನೆಯಿಂದ ಸಂಭವಿಸುವ ರಸ್ತೆ ಅಪಘಾತಗಳಿಗೆ ಬ್ರೇಕ್ ಹಾಕುವ ಉದ್ದೇಶದಿಂದ ಮುಂಬರುವ ದಿನಗಳಲ್ಲಿ ಜಿಲ್ಲೆಯಾದ್ಯಂತ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸುವ ನಿರೀಕ್ಷೆಯಿದೆ. (ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading