ಉಬರಡ್ಕ ಮಿತ್ತೂರು : ಗೃಹಲಕ್ಷ್ಮಿ ಯೋಜನೆಗೆ 3 ವರ್ಷ ತುಂಬಿದ ಹಿನ್ನೆಲೆಯಲ್ಲಿ ಜಾಗೃತಿ ಕಾರ್ಯಕ್ರಮ

ಕರ್ನಾಟಕ ಸರಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಜಾರಿಯಾಗಿ ಮೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಕರ್ನಾಟಕ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸೂಚನೆ ಹಿನ್ನೆಲೆಯಲ್ಲಿ ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಮತ್ತು ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ವತಿಯಿಂದ ಗೃಹಲಕ್ಷ್ಮಿ ಜಾಗೃತಿ ಕಾರ್ಯಕ್ರಮ ಇಂದು ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ಕಚೇರಿಯಲ್ಲಿ ನಡೆಯಿತು.

. . . . . . . . .

ಸುಳ್ಯ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ ಅಧ್ಯಕ್ಷತೆ ಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಪಂಚಾಯತ್ ಆವರಣದಲ್ಲಿ ಗೃಹಲಕ್ಷ್ಮಿ ಪಲಾನುಭವಿಗಳ ಮುಖಾಂತರ ಹಣ್ಣಿನ ಗಿಡ ನೆಡುವ ಮೂಲಕ ಚಾಲನೆ ನೀಡಲಾಯಿತು.

. . . . . . .

ಗೃಹಲಕ್ಷ್ಮಿ ಜಾಗೃತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಭವಾನಿಶಂಕರ್ ಕಲ್ಮಡ್ಕರವರು “ಕರ್ನಾಟಕ ಸರಕಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಮಹಿಳಾ ಸಬಲೀಕರಣ ಮತ್ತು ಸಮ ಸಮಾಜದ ನಿರ್ಮಾಣದ ಹಿನ್ನೆಲೆಯಲ್ಲಿ ಕಲ್ಯಾಣ ಕಾರ್ಯಕ್ರಮವಾಗಿ ಜಾರಿಗೊಳಿಸಿ ಅತ್ಯಂತ ಯಶಸ್ವಿಯಾಗಿ ಅನುಷ್ಠಾನ ಮಾಡಿಕೊಂಡು ಬಂದಿದ್ದೇವೆ. ಆ ಮೂಲಕ ಗ್ರಾಮೀಣ ಮಹಿಳೆಯರು ಹಾಗೂ ಅವರ ಕುಟುಂಬ ಇಂದು ಆರ್ಥಿಕವಾಗಿ ಸದೃಡಗೊಂಡಿದೆ. ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ಗೆ ಗೃಹಲಕ್ಷ್ಮಿ ಯೋಜನೆಯಲ್ಲಿ 4 ಕೋಟಿ ಸಹಾಯಧನ ಇಲ್ಲಿವರೆಗೆ ಫಲಾನುಭವಿಗಳಿಗೆ ನೀಡಲಾಗಿದೆ. ಸುಳ್ಯ ತಾಲೂಕಿಗೆ 146 ಕೋಟಿಗೂ ಹೆಚ್ಚು ಸಹಾಯಧನ ನೀಡಲಾಗಿದೆ. ಈ ಯೋಜನೆ ನಮ್ಮ ಸರಕಾರ ನಿರಂತರವಾಗಿ ಮುಂದುವರಿಸಲು ಬದ್ದವಾಗಿದೆ” ಎಂದು ಹೇಳಿದರು. 

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಶಶಿಧರ್ ಎಂ.ಜೆಯವರು ಮಾತನಾಡಿ “ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರು ಮಕ್ಕಳು, ಹಾಗೂ ಕಾರ್ಮಿಕರು, ಕೃಷಿಕರು, ಬಡ ಮತ್ತು ಮಧ್ಯಮ ವರ್ಗದ ಜನತೆ ಪಲಾನುಭವಿಗಳಾಗಿ ಸರಕಾರದ ಉದ್ದೇಶ ಪೂರ್ಣಗೊಂಡಿದೆ. ಈ ಯೋಜನೆಗಳು ನಿರಂತರವಾಗಿ ಮುಂದುವರಿಯಲಿದೆ” ಎಂದು ಶುಭ ಹಾರೈಸಿದರು.

ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ ಮಾತನಾಡಿ “ಗೃಹಲಕ್ಷ್ಮಿ ಯೋಜನೆಯಿಂದ ಪ್ರತಿಯೊಬ್ಬ ಗೃಹಿಣಿ ನೆಮ್ಮದಿಯ ಬದುಕು ನಡೆಸಲು ಸಹಕಾರಿಯಾಗಿದೆ. ಅದಲ್ಲದೆ ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ ಯೋಜನೆಯಿಂದ ಎಲ್ಲಾ ಕುಟುಂಬಗಳು ಇಂದು ಆರ್ಥಿಕವಾಗಿ ಧೈರ್ಯ ಮತ್ತು ಸದೃಢವಾಗಿ ಜೀವನ ನಡೆಸುತ್ತ ಇರುವುದು ಸಂತಸ ತಂದಿದೆ. ನಮ್ಮ ಸರಕಾರ ಇರುವವರೆಗೆ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ. ಗೃಹ ಜ್ಯೋತಿ ಯೋಜನೆ ಪರಿಶೀಲನೆ ನಡೆಸುತ್ತ ಇದ್ದೇವೆ ಅರ್ಹ ಪಲಾನುಭವಿಗಳು ನಿರಂತರವಾಗಿ ಯೋಜನೆಗಳ ಸದುಪಯೋಗ ಪಡೆಯಲಿದ್ದಾರೆ” ಎಂದು ಹೇಳಿದರು. 

ಈ ಸಂದರ್ಭದಲ್ಲಿ ಉಬರಡ್ಕ ಮಿತ್ತೂರು ನರಸಿಂಹ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಶಿವರಾಮಎಂ.ಪಿ, ಪಂಚಾಯತ್ ಮಾಜಿ ಉಪಾಧ್ಯಕ್ಷೆ ಚಿತ್ರಾವತಿ ಪಾಲಡ್ಕ, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ, ನಗರ ಪಂಚಾಯತ್ ಮಾಜಿ ಸದಸ್ಯರಾದ ಡೇವಿಡ್ ಧೀರಾ ಕ್ರಾಸ್ತ, ನಾಮ ನಿರ್ದೇಶಿತ ಸದಸ್ಯ ರಾಜು ಪಂಡಿತ್, ಯುವ ಕಾಂಗ್ರೆಸ್ ಉಪಾಧ್ಯಕ್ಷ ಆಶಿಕ್ ಆರಂತೋಡು, ಪ್ರಮುಖರಾದ ಶುಭಕರ ಉಬರಡ್ಕ ಸೇರಿದಂತೆ ಗ್ಯಾರಂಟಿ ಯೋಜನೆಗಳ ಪಲಾನುಭವಿಗಳು, ಪಂಚಾಯತ್ ಸಿಬ್ಬಂಧಿಗಳು ಹಾಗೂ ನಾಗರಿಕರು ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿಚಂದ್ರ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading