ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್.ಕೆ.ಎಸ್ ಕಟ್ಟೆಮನೆ ನಿವೃತ್ತಿ

ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರಕಾಶ್.ಕೆ.ಎಸ್ ಕಟ್ಟೆಮನೆ ಅವರು ಜುಲೈ 30ರಂದು ನಿವೃತ್ತಿ ಹೊಂದಿದರು.
ಬಾಳುಗೋಡು ಗ್ರಾಮದ ಪ್ರತಿಷ್ಠಿತ ಕೂಜುಗೋಡು-ಕಟ್ಟೆಮನೆ ದಿ. ಶೂರಪ್ಪ ಗೌಡ ಮತ್ತು ದಿ. ತಾರಾ ದಂಪತಿಯ ದ್ವಿತೀಯ ಪುತ್ರರಾದ ಇವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಬಾಳುಗೋಡು ಹಾಗೂ ಹರಿಹರ ಪಳ್ಳತ್ತಡ್ಕ ಪ್ರಾಥಮಿಕ ಶಾಲೆಯಲ್ಲಿ, ಪ್ರೌಢಶಾಲಾ ವಿದ್ಯಾಭ್ಯಾಸವನ್ನು ಸುಳ್ಯ ಸರಕಾರಿ ಪ್ರೌಢಶಾಲೆ, ಪದವಿಪೂರ್ವ ಹಾಗೂ ಬಿ.ಕಾಂ ಪದವಿಯನ್ನು ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಪೂರ್ಣಗೊಳಿಸಿದ್ದಾರೆ. 1991ರಲ್ಲಿ ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ನೌಕರರಾಗಿ ಸೇರ್ಪಡೆಗೊಂಡ ಇವರು ಸಂಘದ ಕಾಯಂ ನೌಕರರಾಗಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ 2015ರಲ್ಲಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿ ಪದೋನ್ನತಿ ಹೊಂದಿ 11 ವರ್ಷಗಳ ಕಾಲ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿ ಜು.31ರಂದು ನಿವೃತ್ತಿ ಹೊಂದಿದರು.
ಇವರ ಅವಧಿಯಲ್ಲಿ ಸಂಘವು ಉತ್ತಮ ರೀತಿಯಲ್ಲಿ ಅಭಿವೃದ್ಧಿ ಹೊಂದಿದ್ದು, ನಾಲ್ಕು ಬಾರಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ ಲಭಿಸಿದೆ. ಜೊತೆಗೆ ಹಲವು ಸಮಾಜ ಸೇವಾ ಸಂಘ-ಸಂಸ್ಥೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಇವರು ಸುಬ್ರಹ್ಮಣ್ಯದ ಜೇಸಿ ಸಂಸ್ಥೆ, ಲಯನ್ಸ್ ಕ್ಲಬ್ ಸುಬ್ರಹ್ಮಣ್ಯ ಹಾಗೂ ಸೀನಿಯರ್ ಚೇಂಬರ್ ಸುಬ್ರಹ್ಮಣ್ಯ ಇವುಗಳ ಸಕ್ರೀಯ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಇವರ ಪತ್ನಿ ಶ್ರೀಮತಿ ರೇಷ್ಮಾ ಪ್ರಕಾಶ್ ಕಟ್ಟೆಮನೆ ರವರು ಗೃಹಿಣಿಯಾಗಿದ್ದು, ಪುತ್ರಿ ಅಪೂರ್ವ ಕಟ್ಟೆಮನೆ ರವರು ಬೆಂಗಳೂರಿನಲ್ಲಿ ಎಂ.ಎಸ್ಸಿ ಸ್ನಾತಕೋತ್ತರ ಪದವಿ ಪೂರೈಸಿ ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದಾರೆ. ಪುತ್ರ ಸಾಕ್ಷಾಮ್ ಕಟ್ಟೆಮನೆ 8ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. (ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading