
ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಅಂಗಾರರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಬೆಂಗಳೂರಿಗೆ ತೆರಳಿದ್ದ ಶಾಸಕರು ಇಂದು ಸುಳ್ಯಕ್ಕೆ ಆಗಮಿಸಿದ ಸಂದರ್ಭ ತಲೆ ನೋವು ಕಾಣಿಸಿಕೊಂಡಿತ್ತು. ಇದರಿಂದ ಅವರು ಸುಳ್ಯ ಸರಕಾರಿ ಆಸ್ಪತ್ರೆಗೆ ತೆರಳಿ ಅಲ್ಲಿ ಪರೀಕ್ಷೆ ಮಾಡಿಸಿಕೊಂಡಿದ್ದರು. ವರದಿಯಲ್ಲಿ ಪಾಸಿಟಿವ್ ಬಂದಿದ್ದು, ಇದೀಗ ಅವರು ತಮ್ಮ ಮನೆಯಲ್ಲಿ ಹೋಮ್ ಕ್ವಾರಂಟ್ ನ್ ಗೆ ಒಳಗಾಗಿದ್ದಾರೆ ಎಂದು ತಿಳಿದು ಬಂದಿದೆ. ಹಾಗೂ ಅವರ ಕಾರು ಚಾಲಕ ಮುರಳಿ ಅವರಿಗೂ ಕೊರೊನೊ ಪಾಸಿಟಿವ್ ವರದಿ ಬಂದಿರುವುದಾಗಿ ತಿಳಿದುಬಂದಿದೆ.