ಸುಬ್ರಹ್ಮಣ್ಯ : ಆ.09ರಂದು “5ನೇ ವರ್ಷದ ಉಚಿತ ಆರೋಗ್ಯ ಮತ್ತು ಕ್ಯಾನ್ಸರ್ ತಪಾಸಣಾ ಶಿಬಿರ”

ರವಿ ಕಕ್ಕೆಪದವು ಸಮಾಜಸೇವಾ ಟ್ರಸ್ಟ್ ಸಹಯೋಗದಲ್ಲಿ ಸುರಕ್ಷಾ ಚಾರಿಟೇಬಲ್ ಟ್ರಸ್ಟ್, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ರೋಟರಿ ಕ್ಲಬ್ ಸುಬ್ರಹ್ಮಣ್ಯ, ಸೀನಿಯರ್ ಚೇಂಬರ್ ಸುಬ್ರಹ್ಮಣ್ಯ, ಇನ್ನರ್ ವೀಲ್ ಕ್ಲಬ್ ಸುಬ್ರಹ್ಮಣ್ಯ, ಲಯನ್ಸ್ ಕ್ಲಬ್ ಸುಬ್ರಹ್ಮಣ್ಯ, ಕುಕ್ಕೆ ಶ್ರೀ ಆಟೋರಿಕ್ಷಾ ಚಾಲಕ-ಮ್ಹಾಲಕರ ಸಂಘ ಸುಬ್ರಹ್ಮಣ್ಯ, ಯುವತೇಜಸ್ಸು ಟ್ರಸ್ಟ್, ಬಿ.ಎಂ.ಎಸ್ ಆಟೋರಿಕ್ಷಾ ಚಾಲಕ-ಮ್ಹಾಲಕರ ಸಂಘ ಸುಬ್ರಹ್ಮಣ್ಯ, ಕುಕ್ಕೆಶ್ರೀ ಟ್ಯಾಕ್ಸಿ ಚಾಲಕ-ಮ್ಹಾಲಕರ ಸಂಘ ಸುಬ್ರಹ್ಮಣ್ಯ, ಪ್ರೆಸ್ ಕ್ಲಬ್ ಸುಬ್ರಹ್ಮಣ್ಯ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಬ್ರಹ್ಮಣ್ಯ, ಕುಕ್ಕೆ ಸಂಜೀವಿನಿ, ಅಖಿಲ ಭಾರತ ಅಯ್ಯಪ್ಪ ಸೇವಾ ಸಮಿತಿ ಸುಬ್ರಹ್ಮಣ್ಯ, ಆರೋಗ್ಯ ತಪಾಸಣಾ ಹಾಗೂ ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಜುಲೈಕಾ ಯೆನೆಪೋಯ ಕ್ಯಾನ್ಸರ್ ಆಸ್ಪತ್ರೆ ದೇರಳಕಟ್ಟೆ ಇವುಗಳ ಸಹಕಾರದೊಂದಿಗೆ ಆ.09 ಆದಿತ್ಯವಾರದಂದು ಬೆಳಿಗ್ಗೆ 9:00 ಗಂಟೆಯಿಂದ ಮಧ್ಯಾಹ್ನ 1:00 ಗಂಟೆಯವರೆಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ಸಭಾಂಗಣದಲ್ಲಿ “5ನೇ ವರ್ಷದ ಉಚಿತ ಆರೋಗ್ಯ ಮತ್ತು ಕ್ಯಾನ್ಸರ್ ತಪಾಸಣಾ ಶಿಬಿರ” ನಡೆಯಲಿದ್ದು, ಶಿಬಿರದಲ್ಲಿ ಕ್ಯಾನ್ಸರ್ ತಪಾಸಣೆ, ಸ್ತ್ರೀ ರೋಗ ಮತ್ತು ಪ್ರಸೂತಿ ವಿಭಾಗ, ಕಣ್ಣು ಮತ್ತು ದಂತ ವಿಭಾಗ, ಉಚಿತ ಔಷಧಿಗಳು, ಕಿವಿ-ಮೂಗು-ಗಂಟಲು ವಿಭಾಗ, ವೈದ್ಯಕೀಯ ಶಾಸ್ತ್ರ ವಿಭಾಗ, ಮೂಳೆ ವಿಭಾಗ, ಚರ್ಮರೋಗ ವಿಭಾಗ ಹಾಗೂ ಎಲೆಕ್ಟ್ರೋಕಾರ್ಡಿಯೋಗ್ರಾಮ್(ಇಸಿಜಿ)+ಮಧುಮೇಹ ತಪಾಸಣೆ ಇರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಬೆಳಿಗ್ಗೆ 9:00 ಗಂಟೆಗೆ ಶಿಬಿರದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಹರೀಶ್ ಇಂಜಾಡಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಸುಬ್ರಹ್ಮಣ್ಯ ರೋಟರಿ ಕ್ಲಬ್ ಅಧ್ಯಕ್ಷರಾದ ರೋಹಿತ್.ಬಿ.ಬಿ, ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಸತೀಶ್ ಕೂಜುಗೋಡು, ಕಲಾವಿದರಾದ ಯಜ್ಞೇಶ್ ಆಚಾರ್ಯ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಅಧ್ಯಕ್ಷರಾದ ರತ್ನಾಕರ.ಎಸ್, ಸುಬ್ರಹ್ಮಣ್ಯ ಬಿ.ಎಂ.ಎಸ್ ಆಟೋ ಚಾಲಕ-ಮ್ಹಾಲಕ ಸಂಘದ ಅಧ್ಯಕ್ಷರಾದ ಕಿರಣ್ ಪೈಲಾಜೆ, ಸುಬ್ರಹ್ಮಣ್ಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧ್ಯಕ್ಷರಾದ ಶ್ರೀಮತಿ ರತ್ನಾವತಿ, ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ವೆಂಕಟೇಶ್.ಹೆಚ್.ಎಲ್, ಸುಬ್ರಹ್ಮಣ್ಯ ಎಸ್.ಎಸ್.ಪಿಯು ಕಾಲೇಜಿನ ರೆಡ್ ಕ್ರಾಸ್ ಘಟಕದ ಸಂಯೋಜಕರಾದ ಶ್ರೀಮತಿ ಶ್ರುತಿ ಅಶ್ವತ್, ಸುಬ್ರಹ್ಮಣ್ಯ ಸೀನಿಯರ್ ಚೇಂಬರ್ ಅಧ್ಯಕ್ಷರಾದ ಮಾಧವ ದೇವರಗದ್ದೆ ಹಾಗೂ ರವಿ ಕಕ್ಕೆಪದವು ಸಮಾಜಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಡಾ| ರವಿ ಕಕ್ಕೆಪದವು ವೇದಿಕೆಯಲ್ಲಿ ಉಪಸ್ಥಿತರಿರಲಿದ್ದಾರೆ. ನಂತರ ಸನ್ಮಾನ ಕಾರ್ಯಕ್ರಮ ನೆರವೇರಲಿದ್ದು, ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು. ಭಾಗೀರಥಿ ಮುರುಳ್ಯ, ಸುಬ್ರಹ್ಮಣ್ಯ ಪೋಲೀಸ್ ಠಾಣಾ ಸಬ್ ಇನ್ಸ್ಪೆಕ್ಟರ್ ಆಂಜನೇಯ ರೆಡ್ಡಿ, ಸುಬ್ರಹ್ಮಣ್ಯ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷರಾದ ಶ್ರೀಮತಿ ಸೌಮ್ಯ ದಿನೇಶ್, ಸುರಕ್ಷಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿ, ಅಭಯ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರು ಹಾಗೂ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಅಶೋಕ್ ನೆಕ್ರಾಜೆ, ಸುಬ್ರಹ್ಮಣ್ಯದ ಅಖಿಲ ಭಾರತ ಅಯ್ಯಪ್ಪ ಸೇವಾ ಸಂಘದ ಗೌರವಾಧ್ಯಕ್ಷರಾದ ಉಮೇಶ್.ಕೆ.ಎನ್, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೇಶ್, ಸುಬ್ರಹ್ಮಣ್ಯ ಕುಕ್ಕೆಶ್ರೀ ಆಟೋ ಚಾಲಕ-ಮ್ಹಾಲಕ ಸಂಘದ ಅಧ್ಯಕ್ಷರಾದ ಭುವನೇಶ್, ಸುಬ್ರಹ್ಮಣ್ಯ ಕುಕ್ಕೆಶ್ರೀ ಟ್ಯಾಕ್ಸಿ ಚಾಲಕ-ಮ್ಹಾಲಕರ ಸಂಘದ ಅಧ್ಯಕ್ಷರಾದ ಕುಸುಮಾಧರ.ಕೆ, ಕಡಬ ಯುವವಾಹಿನಿ ಘಟಕದ ಅಧ್ಯಕ್ಷರಾದ ಉಮೇಶ್ ಪೂಜಾರಿ ಹಾಗೂ ಹೊಸ ಬೆಳಕು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ತಿಲಕ್.ಎ.ಎ ಈ ಸಂದರ್ಭದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಆಯೋಜಕರು ತಿಳಿಸಿದ್ದಾರೆ. (ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading