ಇರುವಂಬಳ್ಳ ಕಾಂಕ್ರೀಟ್ ರಸ್ತೆ ಹಾಗೂ ಕಾಲುಸಂಕ ನಿರ್ಮಾಣಕ್ಕೆ ಸಚಿವರಿಗೆ ಮನವಿ

ಸುಳ್ಯ : ಇರುವಂಬಳ್ಳ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ಹಾಗೂ ಕಾಲುಸಂಕ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಆರೋಗ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಿಗೆ ಗ್ಯಾರಂಟಿ ಅನುಷ್ಠಾನ ಸಮಿತಿ ಸುಳ್ಯ ತಾಲೂಕು ಸದಸ್ಯ ಅಬ್ಬಾಸ್ ಎ.ಬಿ. ಮನವಿ ಸಲ್ಲಿಸಿದರು.

. . . . . . . . .

ಸುಮಾರು ಹಲವು ವರ್ಷಗಳಿಂದ ಇರುವಂಬಳ್ಳ ಪ್ರದೇಶದಲ್ಲಿ ಸುಮಾರು 500 ರಷ್ಟು ಮನೆಗಳಿದ್ದು, ಶಾಲಾ ಮಕ್ಕಳು ಹಾಗೂ ಸಾರ್ವಜನಿಕರಿಗೆ ಸುರಕ್ಷಿತ ಸಂಚಾರಕ್ಕೆ ಸೂಕ್ತ ರಸ್ತೆ ಮತ್ತು ವಾಹನ ಸಂಚಾರದ ವ್ಯವಸ್ಥೆ ಇಲ್ಲ. ಮೈತಡ್ಕ ಹಾಗೂ ಮಸೀದಿಗೆ ತೆರಳಲು ಸಮರ್ಪಕ ಕಾಲುದಾರಿಯೂ ಇಲ್ಲದಿರುವುದರಿಂದ ಸ್ಥಳೀಯರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಸಚಿವರ ಗಮನಕ್ಕೆ ತರಲಾಯಿತು.

. . . . . . .

ಈ ಕುರಿತು ಹಲವು ಬಾರಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿ ಸಲ್ಲಿಸಿದ್ದರೂ ಇದುವರೆಗೆ ಕಾಮಗಾರಿ ಆರಂಭಗೊಂಡಿಲ್ಲ. ಆದ್ದರಿಂದ ಕಾಂಕ್ರೀಟ್ ರಸ್ತೆ ಹಾಗೂ ಕಾಲುಸಂಕ ನಿರ್ಮಾಣಕ್ಕೆ ಶೀಘ್ರ ಅನುಮೋದನೆ ನೀಡಿ ಕಾಮಗಾರಿ ಆರಂಭಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ರಂಜಿತ್ ರೈ ಮೇನಾಲ ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading