ಅಜ್ಜಾವರ : ಜಾತಿ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮ

ರಾಜ್ಯ ಸರಕಾರವು SIR ಪ್ರಕ್ರಿಯೆಯಲ್ಲಿ ರಾಜ್ಯದ ಅರ್ಹ ಮದಾರರು ಮತದಾರ ಪಟ್ಟಿಯಿಂದ ಹೊರಗೂಳಿಯದಂತೆ ನೋಡಿಕೊಳ್ಳುವ ದೃಷ್ಟಿಯಿಂದ ಜಾತಿ ಪ್ರಮಾಣ ಪತ್ರದ ಮುದ್ರಿತ ಪ್ರತಿಯನ್ನು ಮನೆ ಮನೆಗೆ ತಲುಪಿಸುವ ಯೋಜನೆ ಕಾರ್ಯಗತ ಮಾಡಿದ್ದು, ಅಜ್ಜಾವರ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಇಂದು ಜಾತಿ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮ ಇಂದು ನಡೆಯಿತು.

. . . . . . . . .

ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(SIR) ಪ್ರಕ್ರಿಯೆ ನಡೆಯುತ್ತಿದ್ದು, ಪ್ರತಿಯೊಬ್ಬ ಅರ್ಹ ನಾಗರಿಕರ ಮತದಾನ ಹಕ್ಕು ಉಳಿಯುವಂತೆ ನೋಡಿಕೊಳ್ಳುವ ಹಿನ್ನೆಲೆಯಲ್ಲಿ ಕರಡು ಮತದಾರರ ಪಟ್ಟಿ ಪ್ರಕಟ ವಾದ ನಂತರ ಅಗತ್ಯವೆಂದು ಕಂಡು ಬಂದಲ್ಲಿ ಚುನಾವಣಾ ಆಯೋಗವು BLO ಮೂಲಕ ನೋಟೀಸ್ ನೀಡಿ ಹೆಚ್ಚುವರಿ ಮಾಹಿತಿಯನ್ನು ಕೇಳುವ ಸಂದರ್ಭದಲ್ಲಿ ಆಯೋಗ ಸೂಚಿಸಿರುವ 11 ದಾಖಲೆಗಳಲ್ಲಿ ಜಾತಿ ಪ್ರಮಾಣಪತ್ರವೂ ಒಂದು ಅನ್ವಯಿಸುವ ದಾಖಲೆಯಾಗಿರುವುದರಿಂದ ಈ ಪ್ರಕ್ರಿಯೆಯನ್ನು ಇನ್ನಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಸರಕಾರವು ಜಾತಿ ಪ್ರಮಾಣ ಪತ್ರದ ಮುದ್ರಿತ ಪ್ರತಿಯನ್ನು ಮನೆ ಬಾಗಿಲಿಗೆ ತಲುಪಿಸುವ ಪ್ರಕ್ರಿಯೆಯ ಅಂಗವಾಗಿ ಜಾತಿ ಪ್ರಮಾಣ ಪತ್ರ ವಿತರಿಸುವ ಕಾರ್ಯಕ್ರಮ ನಡೆಯಿತು.

. . . . . . .

ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ರಂಜಿತ್ ರೈ ಮೇನಾಲ, ಸುಳ್ಯ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ಅಬ್ಬಾಸ್ ಎ ಬಿ ರವರು ಜಾತಿ ಪ್ರಮಾಣ ಪತ್ರ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಸಾದ್ ರೈ ಮೇನಾಲ, ದೇವಕಿ ಕಾಟಿಪಳ್ಳ, ಅರಣ್ಯ ಅಧಿಕಾರಿ ಕಾಣಿಮತ್ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನಾ ವ್ಯವಸ್ಥಾಪನಾ ಸಮಿತಿ ಸದಸ್ಯೆ ಅಜ್ಜಾವರ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಶ್ರೀಮತಿ ಲೀಲಾ ಮನಮೋಹನ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಮಾಲಾ, ಪಂಚಾಯತ್ ಸದಸ್ಯರಾದ ಅಬ್ದುಲ್ಲ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading