ಬಿಳಿನೆಲೆಯಲ್ಲಿ ಗಿಡ ನೆಡುವ ಮೂಲಕ ಗೃಹಲಕ್ಷ್ಮಿ ಯೋಜನೆಯ 3ನೇ ವರ್ಷದ ಸಂಭ್ರಮಾಚರಣೆ – “ಪಂಚ ಗ್ಯಾರಂಟಿ ಯೋಜನೆಯಿಂದ ಮಹಿಳೆಯರ ಆರ್ಥಿಕ ಸಬಲೀಕರಣ ಸಾಧ್ಯವಾಗಿದೆ” : ಸುಧೀರ್ ಕುಮಾರ್ ಶೆಟ್ಟಿ

ಬಿಳಿನೆಲೆ : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಮೂರು ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಬಿಳಿನೆಲೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗಿಡ ನೆಡುವ ಮೂಲಕ ಸಂಭ್ರಮಾಚರಣೆ ನಡೆಯಿತು.

. . . . . . . . .

ಕಾರ್ಯಕ್ರಮವನ್ನು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರು ಗಿಡ ನೆಡುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಕಡಬ ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಅವರು, “ಗೃಹಲಕ್ಷ್ಮಿ ಯೋಜನೆಯು ಸಾವಿರಾರು ಮಹಿಳೆಯರ ಬದುಕಿಗೆ ಆರ್ಥಿಕ ಬಲ ನೀಡಿದ್ದು, ಅನೇಕ ಕುಟುಂಬಗಳಿಗೆ ಆಸರೆಯಾಗಿ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಈ ಯೋಜನೆ ಸಹಕಾರಿಯಾಗಿದೆ” ಎಂದು ಹೇಳಿದರು.

. . . . . . .

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಂದ್ರಾವತಿ ಅವರು ಕಾರ್ಯಕ್ರಮವನ್ನು ಸ್ವಾಗತಿಸಿ, ನಿರೂಪಣೆ ನಡೆಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಪುಷ್ಪಾ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಾರದಾ ದಿನೇಶ್, ಮಾಜಿ ಗ್ರಾಮ ಪಂಚಾಯತ್ ಸದಸ್ಯ ಸತೀಶ್ ಕಳಿಗೆ, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರು ಹಾಗೂ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading