ಆನೆಗಳ ಹಾವಳಿಯಿಂದ ತತ್ತರಿಸಿದ ಕೃಷಿಕರು – ತಕ್ಷಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಹಾಗೂ ಸರ್ಕಾರಕ್ಕೆ ವೆಂಕಟ್ ವಳಲಂಬೆ ಆಗ್ರಹ

ಸುಳ್ಯ : ತಾಲೂಕಿನ ದುಗ್ಗಲಡ್ಕ, ಕಂದಡ್ಕ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೀಡು ಬಿಟ್ಟಿರುವ ಆನೆಗಳ ಹಿಂಡು ರಾತ್ರಿ ಕೃಷಿಕರ ಜಮೀನುಗಳಿಗೆ ನುಗ್ಗಿ ಕೃಷಿ ನಾಶಪಡಿಸುತ್ತಿದೆ. ಕಳೆದ ಒಂದು ವಾರದಿಂದ ಸುಳ್ಯ ನಗರ ಪ್ರದೇಶವಾದ ಕುಂಬೆತ್ತಿಬನ, ದುಗ್ಗಲಡ್ಕ, ನೀರಬಿದಿರೆ, ಕಂದಡ್ಕ ಭಾಗದಲ್ಲಿ ಸುಮಾರು 6 ರಿಂದ 7 ಆನೆಗಳ ಹಿಂಡು ವಾಸ್ತವ್ಯವನ್ನು ಹೊಂದಿದ್ದು, ಕೃಷಿ ನಾಶದ ಜೊತೆಗೆ ಸಾರ್ವಜನಿಕರು ಹಾಗೂ ಶಾಲಾ ಮಕ್ಕಳು ಕೂಡ ನಡೆದಾಡಲು ಕಷ್ಟಕರವಾದ ಸನ್ನಿವೇಶ ನಿರ್ಮಾಣ ಮಾಡಿದೆ. ಜನರು ಆತಂಕದಲ್ಲಿ ಸಮಯ ಕಳೆಯುವಂತಾಗಿದೆ. ತಕ್ಷಣ ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಕರ್ನಾಟಕ ಸರ್ಕಾರ ವಿಶೇಷ ಮುತುವರ್ಜಿ ವಹಿಸಿ ಆನೆಗಳನ್ನು ಕಾಡಿಗೆ ಅಟ್ಟಲು ತಕ್ಷಣ ಕ್ರಮಕೈಗೊಳ್ಳಬೇಕು. ಶಾಲಾ ಮಕ್ಕಳು ಮತ್ತು ಸಾರ್ವಜನಿಕರ ಜೀವಕ್ಕೆ ತೊಂದರೆ ಆಗುವ ಮೊದಲು ವಿಶೇಷ ಗಮನ ಕೊಡದೇ ಇದ್ದಲ್ಲಿ ಮುಂದೆ ಯಾವುದೇ ಘಟನೆಯಾದ ಬಳಿಕ ಪರಿಹಾರ ಘೋಷಣೆ ಮಾಡುವುದು ಮುಖ್ಯವಲ್ಲ. ಕೃಷಿ ಹಾನಿಗೂ ಮೊದಲು ಸೂಕ್ತ ಕ್ರಮಗಳನ್ನು ಕೈಗೊಂಡು ನಾಗರಿಕರು ಭಯದ ವಾತಾವರಣದಲ್ಲಿ ಬದುಕುವ ಸ್ಥಿತಿ ನಿರ್ಮಾಣವಾಗಿರುವುದನ್ನು ಗಂಭೀರ ಸಮಸ್ಯೆ ಎಂದು ಪರಿಗಣಿಸಿ ಸೂಕ್ತ ಕ್ರಮಕ್ಕಾಗಿ ಆಗ್ರಹಿಸುತ್ತಿದ್ದೇನೆ ಎಂದು ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಅಧ್ಯಕ್ಷರಾದ ವೆಂಕಟ್ ವಳಲಂಬೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading