ಹವಾಮಾನ ಆಧಾರಿತ ಬೆಳೆ ವಿಮಾ ಕಂತು ಪಾವತಿಗೆ ಇನ್ನೂ ಇದೆ ಅವಕಾಶ – ಅಂತಿಮ ದಿನಾಂಕ ವಿಸ್ತರಣೆ

“ತೋಟಗಾರಿಕಾ ಬೆಳೆಗಳನ್ನು ಬೆಳೆದ ರೈತರು ಹವಾಮಾನ ವೈಪರಿತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ ಪರಿಹಾರವನ್ನು ತುಂಬಿಕೊಡುವ ನಿಟ್ಟಿನಲ್ಲಿ 2026-27ನೇ ಸಾಲಿನ ಮುಂಗಾರು ಹಾಗೂ ಹಿಂಗಾರು ಹಂಗಾಮುಗಳಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯ ನೋಂದಣಿಯ ಅಂತಿಮ ದಿನಾಂಕವನ್ನು ಆ.17 ರವರೆಗೆ ವಿಸ್ತರಣೆ ಮಾಡಲಾಗಿದೆ” ಎಂದು ಜಿಲ್ಲಾ ತೋಟಗಾರಿಕಾ ಜಂಟಿ ನಿರ್ದೇಶಕರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿರುತ್ತದೆ. ಸದರಿ ಯೋಜನೆಯ ಅಡಿಯಲ್ಲಿ ಸಾಲ ಪಡೆದ/ಪಡೆಯದ ರೈತರು ನೋಂದಾವಣೆಗೊಳ್ಳಲು ಅಂತಿಮ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ನೋಂದಾವಣೆಗೊಳ್ಳದ ರೈತರು ತುರ್ತಾಗಿ ಸದರಿ ಯೋಜನೆಯಡಿ ನೋಂದಾವಣೆಗೊಂಡು ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳಬಹುದೆಂದು ತಿಳಿಸಲಾಗಿದೆ.
ಬೆಳೆಸಾಲ ಪಡೆದ ರೈತರು ಬೆಳೆಸಾಲ ಹೊಂದಿರುವ ಬ್ಯಾಂಕ್‌ನಲ್ಲಿ ಹಾಗೂ ಬೆಳೆಸಾಲ ಹೊಂದಿಲ್ಲದ ರೈತರು ತಮ್ಮ ಉಳಿತಾಯ ಖಾತೆ ಹೊಂದಿರುವ ಬ್ಯಾಂಕ್‌ಗಳಲ್ಲಿ ಸದರಿ ಯೋಜನೆಯಡಿ ನೋಂದಾವಣೆಗೊಳ್ಳಬಹುದಾಗಿದ್ದು, ಸಾಮಾನ್ಯ ಸೇವಾ ಕೇಂದ್ರ(CSC) ಹಾಗೂ ಗ್ರಾಮ ಒನ್ ಕೇಂದ್ರಗಳ ಮೂಲಕವೂ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. ಈ ಯೋಜನೆಯ ಅಡಿಯಲ್ಲಿ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ರೈತರು ಪಾವತಿಸಬೇಕಾದ ಪ್ರೀಮಿಯಂ ಮೊತ್ತ ಪ್ರತೀ ಹೆಕ್ಟೇರ್‌ಗೆ ಕ್ರಮವಾಗಿ 6,400 ರೂಪಾಯಿ ಹಾಗೂ 2,350 ರೂಪಾಯಿ ರೂಪಾಯಿಗಳಾಗಿರುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದರಿ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ವಿಮಾ ಸಂಸ್ಥೆಯಾಗಿ ಪ್ರಸಕ್ತ ಸಾಲಿಗೆ TATA AIG ಸಂಸ್ಥೆಯು ಆಯ್ಕೆಯಾಗಿದ್ದು, ಯೋಜನೆಯ ಕುರಿತು ಹೆಚ್ಚಿನ ಮಾಹಿತಿಗಾಗಿ ಪುತ್ತೂರು ಜಿಲ್ಲಾ ಪಂಚಾಯತ್ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ಶ್ರೀಮತಿ ರೇಖಾ.ಎ 9731854527 ಅಥವಾ TATA AIG ಸಂಸ್ಥೆಯ ಪ್ರತಿನಿಧಿ ಸಂಜಯ್ ಪೂಜಾರ್ 8809140983 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. (ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading