ಕೊಲ್ಲಮೊಗ್ರು : ಜಲಜೀವನ್ ಮಿಷನ್ ಯೋಜನೆಯನ್ನು ಪರಿಶೀಲನೆ ನಡೆಸಿದ ಅಧಿಕಾರಿಗಳು ; ಆ.25ರ ಒಳಗೆ ಸಂಪರ್ಕ ಸರಿಪಡಿಸಲು ಸೂಚನೆ

ಕೊಲ್ಲಮೊಗ್ರು ಗ್ರಾಮದ ಶಿವಾಲ-ಪಡ್ಪು ಎಂಬಲ್ಲಿ ನಿರ್ಮಾಣವಾದ ಜಲಜೀವನ್ ಮಿಷನ್ ಯೋಜನೆಯು ಆ ಭಾಗದ ಜನರಿಗೆ ಯಾವುದೇ ರೀತಿಯ ಪ್ರಯೋಜನವಾಗಿಲ್ಲ ಎಂಬ ಬಗ್ಗೆ ಇತ್ತಿಚೆಗೆ ನಡೆದ ಗ್ರಾಮಸಭೆಯಲ್ಲಿ ಚರ್ಚೆ ನಡೆದಿದ್ದು, ಇದರ ಮುಂದುವರಿದ ಭಾಗವಾಗಿ ಇಂಜಿನಿಯರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ 28 ಮನೆಗಳಿಗೆ ನೀರು ಪೂರೈಕೆ ಮಾಡಲು ಗ್ರಾಮ ಪಂಚಾಯತ್ ಗೆ 7 ದಿನಗಳ ಕಾಲಾವಕಾಶ ನೀಡಿದ್ದು, ಆದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ತಿಳಿದುಬಂದಿದೆ. ಈ ಬಗ್ಗೆ ಆ.13ರಂದು ಸ್ಥಳೀಯರು ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿಗಳ ಹಾಗೂ ಜಲಜೀವನ್ ಮಿಷನ್ ಯೋಜನೆಯ ಅಧಿಕಾರಿಗಳ ತಂದಿದ್ದು, ಅಧಿಕಾರಿಗಳು ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆ.25ರ ಒಳಗೆ 28 ಮನೆಗಳ ನೀರಿನ ಸಂಪರ್ಕವನ್ನು ಸರಿಪಡಿಸಲು ಅಧಿಕಾರಿಗಳು ಕೊಲ್ಲಮೊಗ್ರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅವರಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಈ ಸಂದರ್ಭದಲ್ಲಿ ಸ್ಥಳೀಯರಾದ ಹರೀಶ್ ಬಳ್ಳಡ್ಕ, ಸತೀಶ್.ಟಿ.ಎನ್, ಸುಧಾಮಣಿ.ಕೆ.ಎಸ್, ಗಣೇಶ್ ಶಿವಾಲ ಹಾಗೂ ಉದಯ ಶಿವಾಲ ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading