ಕುಮಾರಸ್ವಾಮಿ ವಿದ್ಯಾಲಯದಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜ್ರಂಭಣೆಯಿಂದ ಆಚರಿಸಲಾಯಿತು. ಬೆಳಗ್ಗೆ ಸುಬ್ರಹ್ಮಣ್ಯದ ಕಾಶಿ ಕಟ್ಟೆಯಿಂದ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳು ಸಾಗಿ ಬಂದು ನಂತರ ಶಾಲಾ ಮೈದಾನದಲ್ಲಿ ಸೇರಿ ಧ್ವಜಾರೋಹಣದಲ್ಲಿ ಭಾಗವಹಿಸಿದ್ದರು. ಧ್ವಜಾರೋಹಣವನ್ನು ನೌಕಾ ಸೇನೆಯ ನಿವೃತ್ತ ಅಧಿಕಾರಿಗಳಾದ ಶ್ರೀ ನಾರಾಯಣ ಭಟ್ ನೆರವೇರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ವಿದ್ಯಾರ್ಥಿ ನಾಯಕ ವಹಿಸಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಸುಬ್ರಹ್ಮಣ್ಯ ಆರಕ್ಷಕ ಠಾಣಾಧಿಕಾರಿಗಳಾದ ಆಂಜನೇಯ ರೆಡ್ಡಿ ಆಗಮಿಸಿ ಮಾತನಾಡಿದರು. ಹಾಗೂ ಈ ಕಾರ್ಯಕ್ರಮದ ವೇದಿಕೆಯಲ್ಲಿ ಶಾಲಾ ಅಧ್ಯಕ್ಷರಾದ ಗಣೇಶ್ ಪ್ರಸಾದ್, ಸಂಚಾಲಕರಾದ ಚಂದ್ರಶೇಖರ್ ನಾಯರ್, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯಾರತ್ನ, ಕಾಲೇಜನ ಪ್ರಾಂಶುಪಾಲರಾದ ಸಂಕೀರ್ತ್ ಹೆಬ್ಬಾರ್, ಕಾಲೇಜು ವಿದ್ಯಾರ್ಥಿನಾಯಕ ಜಶ್ವಿನ್ ಉಪಸ್ಥಿತರಿದ್ದರು. ಈ ಸಭಾ ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಅತಿಥಿಗಳು ಬಹುಮಾನಗಳನ್ನ ನೀಡಿ ಗೌರವಿಸಿದರು. ಹಾಗೂ ಶಾಲೆಯ ವಿವಿಧ ವಿಭಾಗದ ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆಗಳನ್ನು ಹಾಡಿದರು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳು ಶಿಕ್ಷಕರು ಉಪನ್ಯಾಸಕ ವೃಂದ ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading