ಬಾಳುಗೋಡು ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಬಾಳುಗೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆ.15ರಂದು 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಬಾಳುಗೋಡಿನಿಂದ ಬಸವನಗುಡಿ ಕೆ.ವಿ ಗೌಡ ಸರ್ಕಲ್ ವರೆಗೆ ಮೆರವಣಿಗೆ ನಡೆಯಿತು. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಚಂದ್ರಹಾಸ ಶಿವಾಲ ಧ್ವಜಾರೋಹಣ ನೆರವೇರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮವನ್ನು ಬಿ.ಆರ್ ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧಿಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಲಾಯಿತು. ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಚಂದ್ರಹಾಸ ಶಿವಾಲ, ಶಾಲಾ ಮುಖ್ಯೋಪಾಧ್ಯಾಯರಾದ ಶುಭಾ.ಕೆ ಹಾಗೂ ಮುಖ್ಯ ಅತಿಥಿಗಳಾಗಿ ನಿವೃತ್ತ ಅಂಚೆ ಪಾಲಕರಾದ ಬಾಲಣ್ಣ ಬಾಳುಗೋಡು, ನಿವೃತ್ತ ಅಂಚೆ ವಿತರಕರಾದ ಧರ್ಮಪಾಲ ಮುಚ್ಚಾರ, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಸುಂದರ ಗೌಡ ಮುಚ್ಚಾರ ಹಾಗೂ ಶ್ರೀಮತಿ ದಮಯಂತಿ ಕಟ್ಟೆಮನೆ, ಬಾಳುಗೋಡು ವಿಶ್ವ ಯುವಕ ಮಂಡಲದ ಪ್ರಧಾನ ಕಾರ್ಯದರ್ಶಿ ಅಜೇಯ ಪೊಯ್ಯೆಮಜಲು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಈ ಸಂದರ್ಭದಲ್ಲಿ ಸಹಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು, ಅಡುಗೆ ಸಿಬ್ಬಂದಿಯವರು ಹಾಗೂ ಊರಿನ ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಶುಭಾ.ಕೆ ಸ್ವಾಗತಿಸಿ ಅತಿಥಿ ಶಿಕ್ಷಕಿ ಸುದರ್ಶಿನಿ ಧನ್ಯವಾದ ಸಮರ್ಪಿಸಿದರು. ಅತಿಥಿ ಶಿಕ್ಷಕಿಯರಾದ ಕೀರ್ತಿ ಹಾಗೂ ಅಕ್ಷಿತಾ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಸಿಹಿ ತಿಂಡಿ ವಿತರಣೆ ಮಾಡಲಾಯಿತು. (ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading