ಕೊಡಿಯಾಲಬೈಲು: 80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

ಮಹಾತ್ಮ ಗಾಂಧಿ  ಮಲ್ನಾಡ್ ಆಂಗ್ಲ ಮಾಧ್ಯಮ ಶಾಲೆ, ಕೊಡಿಯಾಲಬೈಲಿನಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮಲ್ನಾಡ್ ಶಾಲೆಯ ಅಧ್ಯಕ್ಷರಾದ ಪಿ. ಎಸ್. ಗಂಗಾಧರ್ ಅವರು ಧ್ವಜಾರೋಹಣ ನೆರವೇರಿಸಿ, ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಸ್ವಾತಂತ್ರ್ಯೋತ್ಸವದ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಅವರು ದೇಶದ ಸ್ವಾತಂತ್ರ್ಯ, ಏಕತೆ ಹಾಗೂ ರಾಷ್ಟ್ರದ ಅಭಿವೃದ್ಧಿಯಲ್ಲಿ ವಿದ್ಯಾರ್ಥಿಗಳ ಪಾತ್ರದ ಕುರಿತು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತರಾಗಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಓಂ ಪ್ರಕಾಶ್ ಹಾಗೂ  ಜನಾರ್ಧನ್ ಕೊಳಿಂಜಿರೋಡಿ ನಿವೃತ್ತ ಬ್ಯಾಂಕ್ ಉದ್ಯೋಗಿ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಶಾಲೆಯ ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮಿ ಸ್ವಾಗತಿಸಿದರು. ದೈಹಿಕ ಶಿಕ್ಷಕ ಜಯಪ್ರಕಾಶ್ ವಂದಿಸಿದರು.
ಕಾರ್ಯಕ್ರಮದಲ್ಲಿ ಶಿಕ್ಷಕರು, ಬೋಧಕೇತರ ಸಿಬ್ಬಂದಿ, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದು, ದೇಶಭಕ್ತಿಯ ವಾತಾವರಣದಲ್ಲಿ ಸ್ವಾತಂತ್ರ್ಯೋತ್ಸವವನ್ನು ಆಚರಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading