ಪೆರುವಾಜೆ ದೇವರಮಾರು ನಾಗನಕಟ್ಟೆಯಲ್ಲಿ ನಾಗರಪಂಚಮಿ ಆಚರಣೆ

ಪೆರುವಾಜೆ : ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ದೇವರಮಾರು ನಾಗನಕಟ್ಟೆಯಲ್ಲಿ ನಾಗರಪಂಚಮಿ ಆಚರಣೆ ಶ್ರದ್ಧಾಭಕ್ತಿಯಿಂದ ನಡೆಯಿತು.

. . . . . . . . .

ನಾಗರಪಂಚಮಿ ಅಂಗವಾಗಿ ನಾಗನಕಟ್ಟೆಯಲ್ಲಿ ವಿಶೇಷ ಪೂಜಾ ವಿಧಿವಿಧಾನಗಳು ನೆರವೇರಿದವು. ನಾಗದೇವರಿಗೆ ಹಾಲು ಹಾಗೂ ಸಿಯಾಳಾಭಿಷೇಕ ನೆರವೇರಿಸಿ, ವಿಶೇಷ ಪೂಜೆ ಸಲ್ಲಿಸಲಾಯಿತು.ನಾಗದೇವರ ಆರಾಧನೆ ಹಾಗೂ ಧಾರ್ಮಿಕ ವಿಧಿವಿಧಾನಗಳಲ್ಲಿ ಭಕ್ತಾದಿಗಳು ಶ್ರದ್ಧೆಯಿಂದ ಪಾಲ್ಗೊಂಡರು.

. . . . . . .

ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ಪೂಜಾ ಕಾರ್ಯಗಳನ್ನು ನೆರವೇರಿಸಿದರು. ನಾಗರಪಂಚಮಿಯ ಅಂಗವಾಗಿ ದೇವರಮಾರು ನಾಗನಕಟ್ಟೆಗೆ ಆಗಮಿಸಿದ ಭಕ್ತರು ನಾಗದೇವರಿಗೆ ಪ್ರಾರ್ಥನೆ ಸಲ್ಲಿಸಿ, ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸುನಿಲ್ ಕುಮಾರ್ ರೈ ಪೆರುವಾಜೆ, ಸಮಿತಿ ಸದಸ್ಯರು, ದೇವಸ್ಥಾನದ ಸಿಬಂದಿ ವರ್ಗ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading