ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷರಾಗಿ ವಿಶ್ವನಾಥ ರೈ ಕಳಂಜ ಆಯ್ಕೆ

ಪುತ್ತೂರು, ಆ.20 : ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ದ.ಕ.-2ರ ಅಧ್ಯಕ್ಷರಾಗಿ ಸುಳ್ಯ ತಾಲೂಕಿನ ಕಳಂಜದ ಶ್ರೀ ವಿಶ್ವನಾಥ ರೈ ಕಳಂಜ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

. . . . . . . . .

ಆ.20ರಂದು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ಸಭಾಂಗಣದಲ್ಲಿ ನಡೆದ ಜಿಲ್ಲಾ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಜಿಲ್ಲಾ ಅಧ್ಯಕ್ಷ ಪದ್ಮನಾಭ ಶೆಟ್ಟಿ, ರಾಜ್ಯ ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಕಾರ್ಯದರ್ಶಿ ವಿವೇಕ್ ವಿನ್ಸೆಂಟ್ ಪಾಯಸ್, ಮಾಜಿ ಜಿಲ್ಲಾಧ್ಯಕ್ಷರಾದ ಎನ್.ಎ. ರಾಮಚಂದ್ರ ಹಾಗೂ ಸಾಜ ರಾಧಾಕೃಷ್ಣ ಆಳ್ವ, ಪುತ್ತೂರು ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಧ್ಯಕ್ಷ ಸತೀಶ್ ನಾಯ್ಕ, ಪ್ರಾದೇಶಿಕ ಜನಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯ ಸೇರಿದಂತೆ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಮ್ಮುಖದಲ್ಲಿ ವಿಶ್ವನಾಥ ರೈ ಕಳಂಜ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.

. . . . . . .

ಕಳಂಜದವರಾದ ವಿಶ್ವನಾಥ ರೈ ಅವರು 2020ರಿಂದ 2023ರವರೆಗೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ತಾಲೂಕು ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ಜಿಲ್ಲಾ ಸದಸ್ಯರಾಗಿದ್ದಾರೆ. ಕಳಂಜ ಮಂಡಲ ಪಂಚಾಯತ್ ಅಧ್ಯಕ್ಷರಾಗಿ 10 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಅವರು, ಕೃಷಿ ಉತ್ಪನ್ನ ಮಾರುಕಟ್ಟೆ ಸಂಘ (APMC) ಸುಳ್ಯದಲ್ಲಿ ಮೂರು ಬಾರಿ ಉಪಾಧ್ಯಕ್ಷರಾಗಿ ಹಾಗೂ ಎರಡು ಬಾರಿ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ.

ಇದರೊಂದಿಗೆ KMF ಮಂಗಳೂರು ನಿರ್ದೇಶಕರಾಗಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೃಷಿ ಉತ್ಪನ್ನ ಮಾರಾಟ ಸಂಘದ ಮೂರು ಬಾರಿ ನಿರ್ದೇಶಕರಾಗಿ ಸೇವೆ ಸಲ್ಲಿಸಿರುವ ಅವರು, ವಿವಿಧ ಸಾಮಾಜಿಕ ಹಾಗೂ ಸಹಕಾರಿ ಕ್ಷೇತ್ರಗಳಲ್ಲಿ ಅನುಭವ ಹೊಂದಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading