ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ಪ್ರೋತ್ಸಾಹಕ ಪ್ರಶಸ್ತಿ

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ಪ್ರೋತ್ಸಾಹಕ ಪ್ರಶಸ್ತಿ ದೊರಕಿದೆ.
ಸಂಘದ ಸರ್ವತೋಮುಖ ಪ್ರಗತಿಯ ಸಾಧನೆಗಾಗಿ ಆ.22ರಂದು ನಡೆದ ಡಿ.ಸಿ‌.ಸಿ ಬ್ಯಾಂಕ್‌ನ ಮಹಾಸಭೆಯಲ್ಲಿ ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷರಾದ ಎಂ.ಎನ್ ರಾಜೇಂದ್ರ ಕುಮಾರ್ ರವರು ಸಂಘದ ಅಧ್ಯಕ್ಷರಾದ ಡಾ. ಸೋಮಶೇಖರ್ ಕಟ್ಟೆಮನೆ ಹಾಗೂ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀಮತಿ ತೀರ್ಥಕುಮಾರಿ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಗಣೇಶ್ ಭಟ್, ನಿರ್ದೇಶಕರಾದ ಡ್ಯಾನಿ ಯಳದಾಳು, ಶೇಷಪ್ಪ ಗೌಡ ಕಿರಿಭಾಗ, ಗೋಪಾಲಕೃಷ್ಣ, ರೇಗನ್ ಶೆಟ್ಯಡ್ಕ, ಶ್ರೀಮತಿ ವೇದಾವತಿ ಮುಳ್ಳುಬಾಗಿಲು, ಸಂಘದ ಸಿಬ್ಬಂದಿಗಳಾದ ಗೌರೀಶ್.ಕೆ.ಎನ್, ಚೇತನ್.ಕೆ, ಪ್ರಶಾಂತ್ ನಿಡುಬೆ ಹಾಗೂ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಬೆಳ್ಯಪ್ಪ ಗೌಡ ಮಣಿಯಾನಮನೆ ಉಪಸ್ಥಿತರಿದ್ದರು. (ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading