ಕರಾಟೆ ಸ್ಪರ್ಧೆಯಲ್ಲಿ ಮಿಂಚಿದ ಮಲ್ನಾಡ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು| ತ್ರಿವಳಿ ಪದಕಗಳ ಬೇಟೆ; ಕಿಶನ್ಯ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಸುಳ್ಯ: ಇತ್ತೀಚೆಗೆ ನಡೆದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮಹಾತ್ಮ ಗಾಂಧಿ ಮಲ್ನಾಡ್ ಆಂಗ್ಲ ಮಾಧ್ಯಮ ಶಾಲೆ ಕೊಡಿಯಾಲಬೈಲು ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದು, ತ್ರಿವಳಿ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
Under-14, 50+ ಕೆ.ಜಿ. ವಿಭಾಗದಲ್ಲಿ 8ನೇ ತರಗತಿಯ ಕಿಶನ್ಯ ಎಂ. ಆರ್. ಅವರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
Under-17, 30+ ಕೆ.ಜಿ. ವಿಭಾಗದಲ್ಲಿ 8ನೇ ತರಗತಿಯ ಸೋನ ಯಿ ಯುಗಾ ಸಿನಿ ಅವರು ದ್ವಿತೀಯ ಸ್ಥಾನ ಪಡೆದಿದ್ದಾರೆ.
ಅದೇ ರೀತಿ Under-14, 30 ಕೆ.ಜಿ. ವಿಭಾಗದಲ್ಲಿ ಜ್ಯೋತ್ಸ್ನಾ ಎಚ್. ಜೆ. ಅವರು ದ್ವಿತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಅಧ್ಯಕ್ಷರು, ಸಂಚಾಲಕರು, ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗೂ ಶಿಕ್ಷಕ-ರಕ್ಷಕ ಸಂಘದ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ. ವಿದ್ಯಾರ್ಥಿಗಳ ಯಶಸ್ಸಿಗೆ ತರಬೇತಿ ನೀಡಿದ ಕರಾಟೆ ತರಬೇತುದಾರರಿಗೂ ಶಾಲಾ ಆಡಳಿತ ಮಂಡಳಿ ಕೃತಜ್ಞತೆ ಸಲ್ಲಿಸಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading