ಸೆ.13 : ಮುಕ್ಕೂರಿನಲ್ಲಿ ಅಂತರ್‌ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ

ಬೆಳ್ಳಾರೆ : ಮುಕ್ಕೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 17ನೇ ವರ್ಷದ ಗಣೇಶೋತ್ಸವದ ಪ್ರಯುಕ್ತ ಅಂತರ್‌ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ-2026 ಸೆ.13ರಂದು ಮುಕ್ಕೂರು ಶಾಲಾ ವಠಾರದಲ್ಲಿ ನಡೆಯಲಿದೆ.

. . . . . . . . .

ಬೆಳಗ್ಗೆ 10 ರಿಂದ 11.30ರವರೆಗೆ ಸ್ಪರ್ಧೆಯ ಅವಧಿ ನಿಗದಿಪಡಿಸಲಾಗಿದೆ. 1ರಿಂದ 2ನೇ ತರಗತಿ, 3 ರಿಂದ 4 ನೇ ತರಗತಿ, 5ರಿಂದ 7ನೇ ತರಗತಿ ಹಾಗೂ 8ರಿಂದ 10ನೇ ತರಗತಿ ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ.

. . . . . . .

1 ರಿಂದ 2ನೇ ತರಗತಿ, 3 ರಿಂದ 4 ನೇ ತರಗತಿ, 5 ರಿಂದ 7ನೇ ತರಗತಿ ವಿದ್ಯಾರ್ಥಿಗಳು ತಮ್ಮಿಷ್ಟದ ಚಿತ್ರ ಬಿಡಿಸಬಹುದು. 8 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಚಿತ್ರ ಬಿಡಿಸಬೇಕಾದ ವಿಷಯವನ್ನು ಸ್ಥಳದಲ್ಲೇ ತಿಳಿಸಲಾಗುವುದು.

ಸ್ಪರ್ಧೆಗೆ ಸ್ಥಳದಲ್ಲೇ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಚಿತ್ರ ಬಿಡಿಸಲು ಬೇಕಾದ ಹಾಳೆಯನ್ನು ಆಯೋಜಕರು ಒದಗಿಸಲಿದ್ದು, ಅಗತ್ಯ ಪರಿಕರಗಳನ್ನು ಸ್ಪರ್ಧಿಗಳು ತರಬೇಕು. ಪ್ರತಿ ವಿಭಾಗದಲ್ಲೂ ಪ್ರಥಮ ಹಾಗೂ ದ್ವಿತೀಯ ಬಹುಮಾನ ನೀಡಲಾಗುವುದು. ಭಾಗವಹಿಸುವ ಎಲ್ಲ ಸ್ಪರ್ಧಿಗಳಿಗೆ ಪ್ರಮಾಣಪತ್ರ ವಿತರಿಸಲಾಗುವುದು.

ಮೂರು ತಾಲೂಕಿನ ವಿದ್ಯಾರ್ಥಿಗಳಿಗೆ ಅವಕಾಶ : ಚಿತ್ರಕಲಾ ಸ್ಪರ್ಧೆಯಲ್ಲಿ ಸುಳ್ಯ, ಪುತ್ತೂರು ಹಾಗೂ ಕಡಬ ತಾಲೂಕಿನ ವಿದ್ಯಾರ್ಥಿಗಳು ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ 9740189529 ಸಂಪರ್ಕಿಸಬಹುದು ಎಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading