ಎಲಿಮಲೆಯಲ್ಲಿ ಸೆ. 4ರಂದು ಬೃಹತ್ ರಕ್ತದಾನ ಹಾಗೂ ಆರೋಗ್ಯ ತಪಾಸಣಾ ಶಿಬಿರ

ಗ್ರಾಮ ಪಂಚಾಯತ್ ದೇವಚಳ್ಳ, ರೋಟರಿ ಬ್ಲಡ್ ಬ್ಯಾಂಕ್ ಪುತ್ತೂರು, ಆರೋಗ್ಯ ಉಪಕೇಂದ್ರ ಎಲಿಮಲೆ ಮತ್ತು ಕಂದ್ರಪ್ಪಾಡಿ, ಚಿರಾಯು ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಮಾವಿನಕಟ್ಟೆ, ಹಿರಿಯ ವಿದ್ಯಾರ್ಥಿ ಸಂಘ ಸರಕಾರಿ ಪ್ರೌಢಶಾಲೆ ಎಲಿಮಲೆ, ಜೇಸಿಐ ಸುಳ್ಯ ಪಯಸ್ವಿನಿ (ರಿ.) ಸುಳ್ಯ, ಲಯನ್ಸ್ ಕ್ಲಬ್ ಸುಳ್ಯ , ಶಿವಾಜಿ ಫ್ರೆಂಡ್ಸ್ ಕ್ಲಬ್ (ರಿ.) ಹುರುಳಿಯಡ್ಕ, ಶ್ರೀ ವಿಷ್ಣು ಸಂಜೀವಿನಿ ಒಕ್ಕೂಟ ದೇವಚಳ್ಳ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾವಿನಕಟ್ಟೆ ಹಾಗೂ ಗಟ್ಟಿಗಾರು ಕಾರ್ಯಕ್ಷೇತ್ರ ಸಂಪಾಜೆ ವಲಯ, ನುಸ್ರತುಲ್ ಇಸ್ಲಾಂ ಎಸೋಸಿಯೇಷನ್ (ರಿ.) ಎಲಿಮಲೆ, ಕೆವಿಜಿ ಸುಳ್ಯ, ಹಬ್ಬ ಸಮಾಜ ಸೇವಾ ಸಂಘ (ರಿ.) ಸುಳ್ಯ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಬೃಹತ್ ರಕ್ತದಾನ ಹಾಗೂ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ.
ಶಿಬಿರವು ಸೆಪ್ಟೆಂಬರ್ 4ರಂದು ಶುಕ್ರವಾರ ಬೆಳಗ್ಗೆ 9.30 ಗಂಟೆಗೆ ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಲಿದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಮಾಡುವುದರ ಜೊತೆಗೆ ಆರೋಗ್ಯ ತಪಾಸಣೆಯ ಪ್ರಯೋಜನ ಪಡೆದುಕೊಳ್ಳುವಂತೆ ಸಂಘಟಕರು ಮನವಿ ಮಾಡಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading