ಸುಳ್ಯದಲ್ಲಿ ತಾಲೂಕು ಭಜನಾ ಪರಿಷತ್ ಪದಾಧಿಕಾರಿಗಳ ಸಭೆ

ಸುಳ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಸುಳ್ಯ ತಾಲೂಕಿನ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್‌ನ ತಾಲೂಕು ಪದಾಧಿಕಾರಿಗಳ ಸಭೆ ಸೆ. 1ರಂದು ಸುಳ್ಯ ಯೋಜನಾ ಕಚೇರಿಯ ಸಭಾಂಗಣದಲ್ಲಿ ನಡೆಯಿತು.

. . . . . . . . .

ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಸೋಮಶೇಖರ ಪೈಕ ಅಧ್ಯಕ್ಷತೆ ವಹಿಸಿದ್ದರು. ಅವರು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

. . . . . . .

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆ. 29ರಿಂದ ಅ. 4ರವರೆಗೆ ನಡೆಯಲಿರುವ ಏಳು ದಿನಗಳ ಭಜನಾ ತರಬೇತಿ ಕಮ್ಮಟಕ್ಕೆ ಅಭ್ಯರ್ಥಿಗಳ ಆಯ್ಕೆ ಹಾಗೂ ಕಮ್ಮಟದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳುವ ಭಜನಾ ಮಂಡಳಿಗಳ ಕುರಿತು ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ರಾಜ್ಯಾಧ್ಯಕ್ಷ ಚಂದ್ರಶೇಖರ ಸಾಲಿಯಾನ್ ಮಾಹಿತಿ ನೀಡಿದರು.

ಸುಳ್ಯ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ನಡೆಯಲಿರುವ 10ನೇ ವರ್ಷದ ಭಜನೋತ್ಸವ ಕಾರ್ಯಕ್ರಮದ ಪೂರ್ವ ತಯಾರಿ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ತಾಲೂಕು ಭಜನಾ ಪರಿಷತ್ ಸಂಚಾಲಕ ಮಾಧವ ಗೌಡ ಅವರು ಭಜನಾ ಪರಿಷತ್‌ನ ಪದಾಧಿಕಾರಿಗಳ ಜವಾಬ್ದಾರಿಗಳ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.

ವೇದಿಕೆಯಲ್ಲಿ ಭಜನಾ ಪರಿಷತ್ ಸಮನ್ವಯಾಧಿಕಾರಿ ಸಂತೋಷ್, ತಾಲೂಕು ಕಾರ್ಯದರ್ಶಿ ಸತೀಶ್ ಟಿ.ಎನ್., ತಾಲೂಕು ಉಪಾಧ್ಯಕ್ಷರಾದ ಸಂಧ್ಯಾ ಮಂಡೆಕೋಲು ಹಾಗೂ ನಾರಾಯಣ ಕೊಡ್ತುಗುಳಿ, ಗೌರವಾಧ್ಯಕ್ಷ ಶಿವ ಪ್ರಸಾದ್ ಅಲೆಟ್ಟಿ, ಜತೆ ಕಾರ್ಯದರ್ಶಿ ಜಯಪ್ರಕಾಶ್ ಕಲ್ಲಪಳ್ಳಿ ಉಪಸ್ಥಿತರಿದ್ದರು. ತಾಲೂಕು ಮತ್ತು ವಲಯದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಮೇಲ್ವಿಚಾರಕಿ ಜಯಶ್ರೀ ಸ್ವಾಗತಿಸಿದರು. ಮೇಲ್ವಿಚಾರಕಿ ಸವಿತಾ ವಂದಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading