ಅ.16ರಿಂದ 24ರವರೆಗೆ ಸುಳ್ಯದಲ್ಲಿ 55ನೇ ವರ್ಷದ ಸುಳ್ಯ ದಸರಾ | ಆಮಂತ್ರಣ ಪತ್ರಿಕೆ ಬಿಡುಗಡೆ

ಸುಳ್ಯ: ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್, ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ ದಸರಾ ಉತ್ಸವ ಸಮಿತಿ ಹಾಗೂ ಸುಳ್ಯ ತಾಲೂಕು ಶ್ರೀ ಶಾರದಾಂಬ ಉತ್ಸವ ಸಮಿತಿಯ ಆಶ್ರಯದಲ್ಲಿ ನಡೆಯುವ 55ನೇ ವರ್ಷದ ಶ್ರೀ ಶಾರದಾಂಬ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಸೆ. 2ರಂದು ಶ್ರೀ ಚೆನ್ನಕೇಶವ ದೇವಾಲಯದಲ್ಲಿ ನಡೆಯಿತು.

. . . . . . . . .

ಚೆನ್ನಕೇಶವ ದೇವಸ್ಥಾನದ ಮುಂಭಾಗದ ಶ್ರೀ ಶಾರದಾಂಬ ಕಲಾ ವೇದಿಕೆಯಲ್ಲಿ ಅ. 16ರಿಂದ 24ರವರೆಗೆ ಸುಳ್ಯ ಶ್ರೀ ಶಾರದಾಂಬ ಉತ್ಸವ ನಡೆಯಲಿದೆ. ಸುಳ್ಯ ದಸರಾದಲ್ಲಿ ವಿಶೇಷವಾಗಿ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಸುಳ್ಯ ಹಾಗೂ ಸುತ್ತಮುತ್ತಲಿನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಉತ್ಸವವನ್ನು ಯಶಸ್ವಿಗೊಳಿಸುವಂತೆ ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ ಅಧ್ಯಕ್ಷ ನಾರಾಯಣ ಕೇಕಡ್ಕ ಹೇಳಿದರು.

. . . . . . .

ಈ ಸಂದರ್ಭದಲ್ಲಿ ಶಾರದಾಂಬ ಉತ್ಸವ ಸಮಿತಿ ಅಧ್ಯಕ್ಷ ಡಾ. ಲೀಲಾಧರ್, ಸೇವಾ ಸಮಿತಿ ಪ್ರಧಾನ ಕಾರ್ಯದರ್ಶಿ ರಾಜು ಪಂಡಿತ್, ಸೇವಾ ಟ್ರಸ್ಟ್ ನ ಕಾರ್ಯದರ್ಶಿ ಎಂ.ಕೆ. ಸತೀಶ್, ಟ್ರಸ್ಟ್ ಖಜಾಂಜಿ ಬೂಡು ರಾಧಾಕೃಷ್ಣ ರೈ, ಕಾಯರ್ತೋಡಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎಂ. ವೆಂಕಪ್ಪ ಗೌಡ, ಸೇವಾ ಸಮಿತಿ ಉಪಾಧ್ಯಕ್ಷೆ ಲತಾ ಮಧುಸೂಧನ್, ಬಿಜೆಪಿ ಮಂಡಲ ಮಾಜಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಚಂದ್ರಶೇಖರ ಪಂಡಿತ್, ವಿಜಯ ಪಾತಿಕಲ್ಲು, ಹರಿರಾಯ ಕಾಮತ್, ಹೇಮಂತ್ ಕಾಮತ್, ಎನ್.ಎ. ರಾಮಚಂದ್ರ ರಂಜಿತ್ ಸುನಿಲ್ ಕೇರ್ಪಳ, ತೀರ್ಥರಾಮ ಜಾಲ್ಸೂರು, ಹರಿಶ್ಚಂದ್ರ ಪಂಡಿತ್ ಹರೀಶ್ ಕಂಚಿಪಿಲಿ, ಹರೀಶ್ ದೇಂಗೋಡಿ, ವಿಠಲ ಸರ್ವೆಯರ್, ಚಂದ್ರಶೇಖರ್ ಆಡ್ಪಂಗಾಯ ಮತ್ತಿತರರು ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading