3ನೇ ರಾಷ್ಟ್ರೀಯ ಲೋಕ ಅದಾಲತ್ ಸೆ. 19ಕ್ಕೆ ಮುಂದೂಡಿಕೆ | ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶ

ಸುಳ್ಯ: ನ್ಯಾಯಾಲಯಗಳಲ್ಲಿ ಬಾಕಿ ಇರುವ ಹಾಗೂ ವ್ಯಾಜ್ಯ ಪೂರ್ವ ಹಂತದಲ್ಲಿರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಶೀಘ್ರವಾಗಿ ಇತ್ಯರ್ಥಪಡಿಸುವ ಉದ್ದೇಶದಿಂದ ನಡೆಯಲಿರುವ 3ನೇ ರಾಷ್ಟ್ರೀಯ ಲೋಕ ಅದಾಲತ್ ಅನ್ನು ಸೆಪ್ಟೆಂಬರ್ 19ಕ್ಕೆ ಮುಂದೂಡಲಾಗಿದೆ ಎಂದು ಸುಳ್ಯ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶೆ ದಮಯಂತಿ ಸೋಮಯ್ಯ ತಿಳಿಸಿದ್ದಾರೆ.

. . . . . . . . .

ಸೆ. 2ರಂದು ಸುಳ್ಯ ನ್ಯಾಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರಾದ್ಯಂತ ನಡೆಯುವ ಲೋಕ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿರುವ ಹಾಗೂ ವ್ಯಾಜ್ಯ ಪೂರ್ವ ಹಂತದಲ್ಲಿರುವ ವಿವಿಧ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಅವಕಾಶವಿದೆ. ಇದರಿಂದ ಎರಡೂ ಪಕ್ಷಗಾರರಿಗೆ ತ್ವರಿತ ನ್ಯಾಯ ದೊರೆಯುವುದರ ಜೊತೆಗೆ ಸಮಯ ಮತ್ತು ಹಣದ ಉಳಿತಾಯವಾಗಲಿದೆ ಎಂದರು.

. . . . . . .

ಲೋಕ ಅದಾಲತ್‌ನಲ್ಲಿ ಇತ್ಯರ್ಥಗೊಂಡ ಪ್ರಕರಣಗಳಿಗೆ ನ್ಯಾಯಾಲಯದ ಶುಲ್ಕವಾಗಿ ಪಾವತಿಸಿರುವ ಮೊತ್ತವನ್ನು ಮರುಪಾವತಿಸಲಾಗುತ್ತದೆ. ಸಮಾಜಘಾತುಕ ಅಪರಾಧಗಳನ್ನು ಹೊರತುಪಡಿಸಿ ಬ್ಯಾಂಕ್ ಸಾಲ ಮರುಪಾವತಿ, ಕೌಟುಂಬಿಕ ವಿವಾದಗಳು, ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು, ಭೂಸ್ವಾಧೀನ ಹಾಗೂ ಕಾರ್ಮಿಕ ವಿವಾದಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದು ಎಂದು ಅವರು ತಿಳಿಸಿದರು.

ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸುವುದರಿಂದ ಸಮಯ ಮತ್ತು ವೆಚ್ಚ ಉಳಿತಾಯವಾಗುವುದರ ಜೊತೆಗೆ ಪರಸ್ಪರ ಬಾಂಧವ್ಯವೂ ಗಟ್ಟಿಯಾಗುತ್ತದೆ. ಆದ್ದರಿಂದ ಸಾರ್ವಜನಿಕರು ಲೋಕ ಅದಾಲತ್‌ನ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಈ ಹಿಂದೆ ನಡೆದ 2ನೇ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಒಟ್ಟು 251 ಪ್ರಕರಣಗಳ ಪೈಕಿ 172 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ 3.0
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಅಕ್ಟೋಬರ್ 1ರಿಂದ ಡಿಸೆಂಬರ್ 30ರವರೆಗೆ ‘ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ 3.0–ವಿಶೇಷ ಮಧ್ಯಸ್ಥಿಕೆ ಅಭಿಯಾನ’ ಎಂಬ 90 ದಿನಗಳ ವಿಶೇಷ ಅಭಿಯಾನ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಆಗಸ್ಟ್ 1ರಿಂದ ಸೆಪ್ಟೆಂಬರ್ 30ರವರೆಗೆ ವಿಶೇಷ ಮಧ್ಯಸ್ಥಿಕೆ ನಿರ್ದೇಶನ ನೀಡಲಾಗಿದೆ. ಬಾಕಿ ಇರುವ ಪ್ರಕರಣಗಳನ್ನು ಮಧ್ಯಸ್ಥಿಕೆ ಮೂಲಕ ಇತ್ಯರ್ಥಪಡಿಸುವ ಉದ್ದೇಶದಿಂದ ಅಕ್ಟೋಬರ್ನಿಂದ ಡಿಸೆಂಬರ್ ಅಂತ್ಯದವರೆಗೆ ಅಭಿಯಾನ ನಡೆಯಲಿದೆ.

ಪ್ರಕರಣಗಳ ಇತ್ಯರ್ಥ ಸಂದರ್ಭದಲ್ಲಿ ಸಂಬಂಧಿಸಿದ ಎರಡೂ ಕಡೆಯವರಿಗೆ ಹಾಜರಾಗಿ, ಮಧ್ಯಸ್ಥಿಕೆ ನಡೆಸುವ ವಕೀಲರಿಗೆ ಸಹಕರಿಸುವ ಮೂಲಕ ತಮ್ಮ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಂಡು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading