ಗುತ್ತಿಗಾರಿನ ಬ್ಲೆಸ್ಡ್ ಕುರಿಯಕೋಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆ

ಕರ್ನಾಟಕ ಸರ್ಕಾರ, ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ,ಸುಳ್ಯ ಇವರ ಸಹಯೋಗದಲ್ಲಿ 2026-27ನೇ ಸಾಲಿನ ಕ್ಷೇತ್ರ ಮಟ್ಟದ ಕರಾಟೆ ಕ್ರೀಡಾ ಕೂಟವನ್ನು ಗುತ್ತಿಗಾರಿನ ಬ್ಲೆಸ್ಡ್ ಕುರಿಯಕೋಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಆ.27ರಂದು ಯಶಸ್ವಿಯಾಗಿ ಆಯೋಜಿಸಲಾಯಿತು.

. . . . . . . . .

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ರಾಜೇಶ್ ಮಾವಿನಕಟ್ಟೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸುಳ್ಯ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಂದ್ರಶೇಖರ ಹಾಗೂ ಸುಳ್ಯ ತಾಲೂಕು ದೈಹಿಕ ಶಿಕ್ಷಕರ ಗ್ರೇಡ್-1 ಸಂಘದ ಅಧ್ಯಕ್ಷರಾದ ಪದ್ಮನಾಭ ಏನೆಕಲ್ಲು ವಹಿಸಿದ್ದರು. ಶಾಲೆಯ ಮುಖ್ಯ ಗುರುಗಳಾದ ಸಿಸ್ಟರ್ ಟ್ರೇಸಾ ಜೋನ್ ಅವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

. . . . . . .

ತಾಲೂಕಿನ ವಿವಿಧ ಶಾಲೆಗಳಿಂದ ಆಗಮಿಸಿದ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕರಾಟೆ ಸ್ಪರ್ಧೆಯಲ್ಲಿ ಉತ್ಸಾಹದಿಂದ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ಗಣ್ಯರ ಸಮ್ಮುಖದಲ್ಲಿ ವಿತರಿಸಲಾಯಿತು. ವಿಜೇತ ವಿದ್ಯಾರ್ಥಿ, ವಿದ್ಯಾರ್ಥಿನಿಯರನ್ನು ಅಭಿನಂದಿಸಿ ಮುಂದಿನ ಹಂತದ ಸ್ಪರ್ಧೆಗಳಿಗೆ ಶುಭ ಹಾರೈಸಲಾಯಿತು. ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿ, ವಿದ್ಯಾರ್ಥಿನಿಯರು ದೈಹಿಕ ಶಿಕ್ಷಕರು ಹಾಗೂ ಅಧಿಕಾರಿಗಳಿಗೆ ಉಪಹಾರ ಮತ್ತು ಊಟದ ವ್ಯವಸ್ಥೆ ಮಾಡಲಾಯಿತು.

ಕೊನೆಯಲ್ಲಿ ನಡೆದ ಸಮಾರಂಭದಲ್ಲಿ ಸ್ಪರ್ಧೆಯು ಯಶಸ್ವಿಯಾಗಿ ನೆರವೇರಲು ಸಹಕರಿಸಿದ ಎಲ್ಲಾ ಅಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಸಂಘಟಕರು ಹಾಗೂ ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸಲಾಯಿತು. ಕ್ರೀಡೆಯು ವಿದ್ಯಾರ್ಥಿ, ವಿದ್ಯಾರ್ಥಿನಿಯರಲ್ಲಿ ಶಿಸ್ತು, ಆತ್ಮವಿಶ್ವಾಸ, ಧೈರ್ಯ, ದೈಹಿಕ ಕ್ಷಮತೆ ಹಾಗೂ ಕ್ರೀಡಾ ಮನೋಭಾವವನ್ನು ಬೆಳೆಸುತ್ತದೆ ಎಂಬ ಸಂದೇಶದೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಸಮಾರೋಪಗೊಳಿಸಲಾಯಿತು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading