ನಾಲ್ಕೂರು ಗ್ರಾಮಸ್ಥರಿಂದ ಕಸ್ತೂರಿ ರಂಗನ್ ವರದಿಯ ವಿರುದ್ಧ ಪ್ರತಿಭಟನೆ ; ಗುತ್ತಿಗಾರು ಗ್ರಾಮ ಪಂಚಾಯತ್ ಗೆ ಆಕ್ಷೇಪಣಾ ಪತ್ರ ಸಲ್ಲಿಕೆ

ಕಸ್ತೂರಿ ರಂಗನ್ ವರದಿ ಹಾಗೂ 7ನೇ ಕರಡು ಅಧಿಸೂಚನೆಯಡಿ ಪರಿಸರ ಸೂಕ್ಷ್ಮವಲಯ ಘೋಷಣೆಯ ವಿರುದ್ಧ ನಾಲ್ಕೂರು ಗ್ರಾಮದ ರೈತರು ಹಾಗೂ ಗ್ರಾಮಸ್ಥರು ಸೆ.03ರಂದು ಗುತ್ತಿಗಾರು ಗ್ರಾಮ ಪಂಚಾಯತ್ ಕಛೇರಿ ಎದುರು ಪ್ರತಿಭಟನೆ ನಡೆಸಿ ಪಂಚಾಯತ್ ಗೆ ಆಕ್ಷೇಪಣಾ ಪತ್ರ ಸಲ್ಲಿಕೆ ಮಾಡಿದರು. ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ ಕಿಶೋರ್ ಶಿರಾಡಿ ಅವರ ನೇತೃತ್ವದಲ್ಲಿ ನಡೆದ ಹೋರಾಟವು ಕಾನೂನುಬದ್ಧ ಹಾಗೂ ಪ್ರಜಾಪ್ರಭುತ್ವದ ಮಾರ್ಗದಲ್ಲಿ ನಡೆಯಲಿದೆ ಎಂದು ತಿಳಿಸಲಾಯಿತು. ಮಲೆನಾಡು ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಆನೆ ದಾಳಿಗಳು ಹಾಗೂ ಕಾಡುಪ್ರಾಣಿಗಳ ಹಾವಳಿಯಿಂದ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆಯೂ ಗಮನ ಸೆಳೆಯಲಾಯಿತು.
ಈ ಸಂದರ್ಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಚಂದ್ರಶೇಖರ ಬಾಳುಗೋಡು ರವರು ಕಸ್ತೂರಿ ರಂಗನ್ ವರದಿ ಹಾಗೂ ಪರಿಸರ ಸೂಕ್ಷ್ಮವಲಯ ಘೋಷಣೆಯಿಂದ ಕೃಷಿಕರು, ಭೂಮಾಲಿಕರು ಹಾಗೂ ಗ್ರಾಮಸ್ಥರ ಮೇಲೆ ಉಂಟಾಗಬಹುದಾದ ಪರಿಣಾಮಗಳನ್ನು ವಿವರಿಸಿದರು. ನಂತರ ಮಾತನಾಡಿದ ಕಿಶೋರ್ ಶಿರಾಡಿ ಅವರು ಜನರ ಹಕ್ಕುಗಳು ಮತ್ತು ರೈತರ ಹಿತಾಸಕ್ತಿಗಳ ರಕ್ಷಣೆಗೆ ಜಾತಿ-ಪಕ್ಷಭೇದವಿಲ್ಲದೇ ಕಾನೂನಿನ ಚೌಕಟ್ಟಿನಲ್ಲಿ ಹಾಗೂ ಪ್ರಜಾಪ್ರಭುತ್ವದ ರೀತಿಯಲ್ಲಿ ಹೋರಾಟ ಮುಂದುವರಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ನಾಲ್ಕೂರು ಗ್ರಾಮದ ರೈತರು, ಗ್ರಾಮಸ್ಥರು, ಪ್ರಮುಖರು ಹಾಗೂ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕಾರ್ಯಕರ್ತರು ಉಪಸ್ಥಿತರಿದ್ದರು.
ಲೋಕೇಶ್ ಪೀರನಮನೆ ಸ್ವಾಗತಿಸಿ ಲೋಕೇಶ್ ಕುಕ್ಕುಜೆ ಧನ್ಯವಾದ ಸಮರ್ಪಿಸಿದರು. (ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading