ದೇವಚಳ್ಳದಲ್ಲಿ ಕಸ್ತೂರಿರಂಗನ್ ವರದಿ ವಿರುದ್ಧ ಪ್ರತಿಭಟನೆ ; ಗ್ರಾಮದ ಆಡಳಿತಾಧಿಕಾರಿಗೆ ಆಕ್ಷೇಪಣಾ ಪತ್ರ ಸಲ್ಲಿಕೆ

ದೇವಚಳ್ಳ, ಸೆಪ್ಟೆಂಬರ್ 3, 2026 : ಕಸ್ತೂರಿರಂಗನ್ ವರದಿ ಹಾಗೂ 7ನೇ ಕರಡು ಅಧಿಸೂಚನೆಯಡಿ ಪರಿಸರ ಸೂಕ್ಷ್ಮ ವಲಯ ಘೋಷಣೆಯ ವಿರುದ್ಧ ದೇವಚಳ್ಳ ಗ್ರಾಮದ ರೈತರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ಬಳಿಕ ಗ್ರಾಮದ ಆಡಳಿತಾಧಿಕಾರಿ ಅವರಿಗೆ ಆಕ್ಷೇಪಣಾ ಪತ್ರ ಸಲ್ಲಿಸಲಾಯಿತು.

. . . . . . . . .

ಈ ಸಂದರ್ಭದಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಜಿಲ್ಲಾ ಸಂಚಾಲಕರಾದ ಕಿಶೋರ್ ಶಿರಾಡಿ ಮಾತನಾಡಿ, ಕಸ್ತೂರಿರಂಗನ್ ವರದಿಯಿಂದ ಮಲೆನಾಡಿನ ಕೃಷಿಕರು, ಭೂಮಾಲೀಕರು ಹಾಗೂ ಗ್ರಾಮಸ್ಥರ ಜೀವನೋಪಾಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಆತಂಕ ವ್ಯಕ್ತಪಡಿಸಿದರು.

. . . . . . .

ಕಸ್ತೂರಿರಂಗನ್ ವರದಿಯ ವಿರುದ್ಧದ ಹೋರಾಟವನ್ನು ಕಾನೂನುಬದ್ಧವಾಗಿ ಹಾಗೂ ಪ್ರಜಾಪ್ರಭುತ್ವದ ಮಾರ್ಗದಲ್ಲಿ ಮುಂದುವರಿಸಲಾಗುವುದು. ಜನರ ಹಕ್ಕು, ಕೃಷಿ ಭೂಮಿ ಹಾಗೂ ಜೀವನೋಪಾಯದ ರಕ್ಷಣೆಗೆ ಪಕ್ಷಾತೀತವಾಗಿ ಮತ್ತು ಜಾತ್ಯತೀತವಾಗಿ ಎಲ್ಲರೂ ಒಗ್ಗೂಡಿ ಹೋರಾಟ ನಡೆಸಬೇಕಾಗಿದೆ ಎಂದು ಅವರು ಹೇಳಿದರು.

ಮಲೆನಾಡಿನಲ್ಲಿ ಹೆಚ್ಚುತ್ತಿರುವ ಆನೆ ದಾಳಿ ಹಾಗೂ ಕಾಡುಪ್ರಾಣಿಗಳ ಹಾವಳಿಯಿಂದ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಕಾಡುಪ್ರಾಣಿಗಳ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸುವುದರ ಜೊತೆಗೆ, ಪಶ್ಚಿಮ ಘಟ್ಟದ ಗಡಿಯನ್ನು ಸ್ಪಷ್ಟವಾಗಿ ಗುರುತಿಸಿ, ಸ್ಥಳೀಯ ಜನರ ಹಿತಾಸಕ್ತಿಗೆ ಧಕ್ಕೆಯಾಗದ ರೀತಿಯಲ್ಲಿ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಕಿಶೋರ್ ಶಿರಾಡಿ ಆಗ್ರಹಿಸಿದರು.

ಸ್ಥಳೀಯ ಜನರ ಅಭಿಪ್ರಾಯವನ್ನು ಪರಿಗಣಿಸದೆ ಪರಿಸರ ಸೂಕ್ಷ್ಮ ವಲಯ ಘೋಷಣೆ ಮಾಡಬಾರದು. ರೈತರು ಹಾಗೂ ಗ್ರಾಮಸ್ಥರ ಹಕ್ಕುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿಯೂ ಕಾನೂನು ಹೋರಾಟ ಮತ್ತು ಪ್ರಜಾಪ್ರಭುತ್ವದ ಹೋರಾಟವನ್ನು ಮುಂದುವರಿಸಲಾಗುವುದು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ದೇವಚಳ್ಳ ಗ್ರಾಮದ ರೈತರು, ಗ್ರಾಮಸ್ಥರು ಹಾಗೂ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಜಿಲ್ಲಾ ಪ್ರಮುಖರು, ತಾಲೂಕು ವಲಯ ಪ್ರಮುಖರು, ಗ್ರಾಮದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading