ಗುತ್ತಿಗಾರು ಶ್ರೀಕೃಷ್ಣ ಭಜನಾ ಮಂದಿರದಲ್ಲಿ ಅಷ್ಟಮಿ ಕಾರ್ಯಕ್ರಮ

ಗುತ್ತಿಗಾರಿನ ಶ್ರೀಕೃಷ್ಣ ಭಜನಾ ಮಂದಿರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಸೆ.04ರಂದು ವಿವಿಧ ಕಾರ್ಯಕ್ರಮಗಳು ಜರುಗಿದವು. ವಿಶ್ವನಾಥ ಹೊಸೊಳಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಜೆಸಿಐ ಪಂಜ ಪಂಚಶ್ರೀ ಅಧ್ಯಕ್ಷರಾದ ದೇವಿಪ್ರಸಾದ್ ಚಿಕ್ಮುಳಿ ಉಪಸ್ಥಿತರಿದ್ದರು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಯುವಕ ಮಂಡಲದ ಅಧ್ಯಕ್ಷರಾದ ಅಜಿತ್ ಬಾಕಿಲ ವಹಿಸಿದ್ದರು. ರಮೇಶ್ ಮೆಟ್ಟಿನಡ್ಕ ಸ್ವಾಗತಿಸಿ ಲೀಲಾಧರ್ ಅಡ್ಡನಪಾರೆ ಧನ್ಯವಾದ ಸಮರ್ಪಿಸಿದರು.

. . . . . . . . .

ನಂತರ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ರೀತಿಯ ಸ್ಪರ್ಧೆಗಳನ್ನು ನಡೆಸಲಾಯಿತು. ಪುಟಾಣಿ ಮಕ್ಕಳ ಶ್ರೀಕೃಷ್ಣ ವೇಷ ಸ್ಪರ್ಧೆ ವಿಶೇಷವಾಗಿತ್ತು.

. . . . . . .

ನಂತರ ನಡೆದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಭಜನಾ ಮಂದಿರದ ಅಧ್ಯಕ್ಷರಾದ ಪೂರ್ಣಚಂದ್ರ ಪೈಕ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗುತ್ತಿಗಾರು ಗ್ರಾಮ ಪಂಚಾಯತ್ ಆಡಳಿತಾಧಿಕಾರಿಗಳಾದ ದೇವರಾಜ್ ಮುತ್ಲಾಜೆ ಹಾಗೂ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಗುತ್ತಿಗಾರು ಗ್ರಾಮ ಪಂಚಾಯತ್‌ನ ಸ್ವಚ್ಛತಾ ಕಾರ್ಯಕರ್ತೆಯರಾದ ಶ್ರೀಮತಿ ರಮಿತಾ ಆಚಳ್ಳಿ, ಶ್ರೀಮತಿ ರತ್ನಾವತಿ ಚತ್ರಪ್ಪಾಡಿ ಇವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಭಜನಾ ಮಂದಿರದ ಗೌರವಾಧ್ಯಕ್ಷರಾದ ರವಿಪ್ರಕಾಶ್ ಬಳ್ಳಡ್ಕ, ಅಜಿತ್ ಬಾಕಿಲ ಹಾಗೂ ಜಯಪ್ರಕಾಶ್ ಬಾಕಿಲ ಉಪಸ್ಥಿತರಿದ್ದರು. ನಂತರ ಸಂಜೆಯಿಂದ ರಾತ್ರಿವರೆಗೆ ಭಜನಾ ಕಾರ್ಯಕ್ರಮ ನಡೆಯಿತು. ಭಜನಾ ಮಂದಿರದ ಮಾಜಿ ಅಧ್ಯಕ್ಷರಾದ ಕಿಶೋರ್ ಕುಮಾರ್ ಪೈಕ ಕಾರ್ಯಕ್ರಮ ನಿರ್ವಹಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading