ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ತರಬೇತಿ ಕಾರ್ಯಾಗಾರ

ಜೇಸಿಐ ಸುಳ್ಯ ಪಯಸ್ವಿನಿ (ರಿ.) ಸುಳ್ಯ ಇದರ ಜೇಸಿಐ ಸಪ್ತಾಹ “ಸುಸ್ನಿಲ 2026” ಅಂಗವಾಗಿ ಸುಳ್ಯದ ಮೆಟ್ರಿಕ್ ನಂತರದ ವಿದ್ಯಾರ್ಥಿನಿ ನಿಲಯದ ವಿದ್ಯಾರ್ಥಿಗಳಿಗೆ ಮುಟ್ಟು ಗುಟ್ಟಲ್ಲ ಹದಿಹರೆಯದ ಹೆಜ್ಜೆಗೆ ಆರೋಗ್ಯದ ಮಾಹಿತಿ ಕಾರ್ಯಾಗಾರ ಸೆ.05 ರಂದು ನಡೆಯಿತು.

. . . . . . . . .

ಜೇಸಿಐ ಸುಳ್ಯ ಪಯಸ್ವಿನಿಯ ಪೂರ್ವಾಧ್ಯಕ್ಷರಾದ ಜೇಸಿ ಹೆಚ್ ಜಿ ಎಪ್ ರಂಜಿತ್ ಕುಕ್ಕೆಟ್ಟಿ ಅವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು. 

. . . . . . .

ಘಟಕಾಧ್ಯಕ್ಷರಾದ ಜೆಎಫ್ಎಂ ಲತಾಶ್ರೀ ಸುಪ್ರೀತ್ ಮೋಂಟಡ್ಕ ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಸುಳ್ಯ ತಾಲೂಕಿನ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಪ್ರಮೀಳಾ ಟಿ ಯವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಮನಮುಟ್ಟುವ ರೀತಿಯಲ್ಲಿ ತರಬೇತಿ ಕಾರ್ಯಾಗಾರವನ್ನು ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ತಾಲೂಕು ಗೌಡ ಮಹಿಳಾ ಘಟಕ ಸುಳ್ಯ ಇದರ ಅಧ್ಯಕ್ಷರಾದ ಶ್ರೀಮತಿ ವಿನುತಾ ಪಾತಿಕಲ್ಲು ಭಾಗವಹಿಸಿ ಶುಭ ಹಾರೈಸಿದರು.

ಸಪ್ತಾಹ ನಿರ್ದೇಶಕ ವಿನೋದ್ ಮೂಡಗದ್ದೆ ಸಪ್ತಾಹ ವರದಿ ಮಂಡಿಸಿದರು.

ಗುರುಪ್ರಸಾದ್ ನಾಯಕ್ ಅತಿಥಿಗಳನ್ನು ವೇದಿಕೆಗೆ ಅಹ್ವಾನಿಸಿದರು.

ಸ್ನಿಗ್ಧ ಮೋಂಟಡ್ಕ ಜೇಸಿ ವಾಣಿ ವಾಚಿಸಿದರು. ಕಾರ್ಯಕ್ರಮ ಸಂಯೋಜಕಿ ಶೋಭ ಅಶೋಕ್ ತರಬೇತಿದಾರರನ್ನು ಪರಿಚಯಿಸಿದರು. ಕಾರ್ಯದರ್ಶಿ ತಾರಾ ಚೂಂತಾರು ವಂದಿಸಿದರು. 

 ಕಾರ್ಯಕ್ರಮದಲ್ಲಿ ಪೂರ್ವ ವಲಯಾಧ್ಯಕ್ಷರಾದ ಪಿಪಿಪಿ ಅಶೋಕ್ ಚೂಂತಾರು, ನಿಲಯ ಮೇಲ್ವಿಚಾರಕಿ ಹೇಮಲತಾ, ನಿಲಯದ ಸಿಬ್ಬಂದಿ ವರ್ಗದವರು, ಜೇಸಿ ಸದಸ್ಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading