ಪಂಜ : ಮದ್ಯವರ್ಜನ ಶಿಬಿರದ ಪೂರ್ವಭಾವಿ ಸಭೆ

ಪಂಜದ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿರುವ ಮದ್ಯವರ್ಜನ ಶಿಬಿರದ ಪೂರ್ವಭಾವಿ ಸಭೆಯು ಸೆ. 6ರಂದು ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ನಡೆಯಿತು. 

. . . . . . . . .

ಸಭೆಯ ಅಧ್ಯಕ್ಷತೆಯನ್ನು ವಲಯದ ಅಧ್ಯಕ್ಷ ಮೋನಪ್ಪ ಗೌಡ ಬೊಳ್ಳಜೆ ವಹಿಸಿದ್ದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ವಿಶ್ವನಾಥ ಕಳೆಂಜ ಕಾರ್ಯಕ್ರಮವನ್ನು ಉದ್ಘಾಟಿಸಿದರು.

. . . . . . .

ತಾಲೂಕು ಯೋಜನಾಧಿಕಾರಿ ಮಾಧವ ಗೌಡ ಪ್ರಾಸ್ತಾವಿಕವಾಗಿ ಮಾತನಾಡಿ, ಮದ್ಯವರ್ಜನ ಶಿಬಿರದ ರೂಪುರೇಷೆಗಳ ಕುರಿತು ಮಾಹಿತಿ ನೀಡಿದರು. ಶಿಬಿರದ ಸಮಿತಿ ರಚನೆ ಹಾಗೂ ಶಿಬಿರಾರ್ಥಿಗಳ ಆಯ್ಕೆ ಪ್ರಕ್ರಿಯೆಯ ಬಗ್ಗೆಯೂ ಸಂಕ್ಷಿಪ್ತವಾಗಿ ವಿವರಿಸಿದರು.

ಬಳಿಕ ಪದ್ಮನಾಭ ರೈ ಅವರನ್ನು ಸರ್ವಾನುಮತದಿಂದ ಮದ್ಯವರ್ಜನ ಶಿಬಿರದ ಅಧ್ಯಕ್ಷರಾಗಿ ಆಯ್ಕೆ ಮಾಡಿ, ಶಿಬಿರದ ಸಮಿತಿಯನ್ನು ರಚಿಸಲಾಯಿತು.

ಕಾರ್ಯಕ್ರಮದಲ್ಲಿ ವಲಯದ ಒಕ್ಕೂಟಗಳ ಅಧ್ಯಕ್ಷ ಧರ್ಮಪಾಲ ಕಣ್ಕಲ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸುಳ್ಯ ತಾಲೂಕು ಮಾಜಿ ಅಧ್ಯಕ್ಷೆ ವಿಮಲ ರಂಗಯ್ಯ, ಜಿಲ್ಲಾ ಸದಸ್ಯ ಶಿವಪ್ರಸಾದ್ ಮಾದನಮನೆ, ದಕ್ಷಿಣ ಕನ್ನಡ ಹಾಲು ಉತ್ಪಾದಕ ಸಹಕಾರಿ ಸಂಘದ ನಿರ್ದೇಶಕ ಭರತ್ ನೆಕ್ರಾಜೆ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಬಾಲಕೃಷ್ಣ ಪುತ್ಯ, ಕುಮಾರ್ ಪುರ್ಲುಂಪಾಡಿ, ಅರುಣ್ ರೈ ಗೆಜ್ಜೆ, ವಾಸುದೇವ ಕೆರೆಕ್ಕೋಡಿ, ಚಂದ್ರಶೇಖರ್ ಕಟ್ಟ, ಮಹಾಬಲ ಗುಡ್ಡೆಮನೆ, ವಿಶ್ವನಾಥ ಕಲ್ಲೆಂಬಿ ಸೇರಿದಂತೆ ಒಕ್ಕೂಟಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಭಜನಾ ಪರಿಷತ್ತಿನ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಶೌರ್ಯ ವಿಪತ್ತು ಘಟಕದ ಸದಸ್ಯರು, ನವಜೀವನ ಸಮಿತಿ ಸದಸ್ಯರು ಹಾಗೂ ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು. ಮೇಲ್ವಿಚಾರಕಿ ಮಮತಾ ಕಾರ್ಯಕ್ರಮ ನಿರೂಪಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading