ಬಾಳುಗೋಡು: ಶಾಲಾ ಶಿಬಿರ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ)ಸುಳ್ಯ ತಾಲೂಕು, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಬಾಳುಗೋಡು, ಇವುಗಳ ಸಂಯುಕ್ತ ಆಶ್ರಯದಲ್ಲಿ ದ.ಕ.ಜಿ.ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಶುಭ ದಯಾನಂದರವರ ಅಧ್ಯಕ್ಷತೆಯಲ್ಲಿ ಶಾಲಾ ಶಿಬಿರ ಕಾರ್ಯಕ್ರಮವನ್ನು ಸೆ. 9ರಂದು ದ.ಕ.ಜಿ.ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಸಲಾಯಿತು.

. . . . . . . . .

ಕಾರ್ಯಕ್ರಮವನ್ನು ಬಾಳುಗೋಡು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ನಿತಿನ್ ಕುಮಾರ್ ರವರು ದೀಪ ಪ್ರಜ್ವಲಿಸಿ ಶುಭಕೋರಿದರು.
ಈ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ಸುಬ್ರಹ್ಮಣ್ಯ ವಲಯದ ಮೇಲ್ವಿಚಾರಕ ಬಾಲಕೃಷ್ಣ ಗೌಡ ಕೆ. ರವರು ಪ್ರಾಸ್ತವಿಕವಾಗಿ ಮಾತನಾಡಿದರು.

. . . . . . .

ಸಂಪನ್ಮೂಲ ವ್ಯಕ್ತಿಯಾಗಿ ಮನೋರಮ ಮುಚ್ಚಾರರವರು ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಕರಕುಶಲ ವಸ್ತುಗಳ ತಯಾರಿಕೆ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಮಕ್ಕಳಿಗೆ ಬಣ್ಣ ಬಣ್ಣದ ಕಾಗದಗಳಿಂದ, ತಂತಿಗಳಿಂದ ಹೂದಾನಿಗಳನ್ನು, ಅಲಂಕಾರಿಕ ಹೂಗಳನ್ನು ಮಾಡುವ ಬಗ್ಗೆ ಪ್ರಾತ್ಯಕ್ಷಿಕೆಯನ್ನು ಮಾಡಿ ತೋರಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಅತಿಥಿ ಶಿಕ್ಷಕಿ ಸುದರ್ಶಿನಿ ಉಪಸ್ಥಿತರಿದ್ದರು. ಬಾಳುಗೋಡು ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ದೀಕ್ಷಾರವರು ಸ್ವಾಗತಿಸಿ, ಶಾಲಾ ಶಿಕ್ಷಕಿ ಅಕ್ಷಿತಾ ವಂದಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading