ಕಾಯರ್ತಡ್ಕ ಶಾಲೆಯಲ್ಲಿ ಸಾಕ್ಷರತಾ ದಿನಾಚರಣೆ, ವನಮಹೋತ್ಸವ | ಶಿಕ್ಷಕಿ ರಶ್ಮಿ ಕುಂದಾಪುರ ಅವರಿಗೆ ರೋಟರಿ ನ್ಯಾಷನಲ್ ಬಿಲ್ಡರ್ ಪ್ರಶಸ್ತಿ ಪ್ರದಾನ

ಮುರುಳ್ಯ: ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ಮುರುಳ್ಯ ಗ್ರಾಮದ ಕಾಯರ್ತಡ್ಕ ಶಾಲೆಯಲ್ಲಿ ಸೆ. 8ರಂದು ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಹಾಗೂ ವನಮಹೋತ್ಸವ ಕಾರ್ಯಕ್ರಮ ನಡೆಯಿತು.

. . . . . . . . .

ಕಾರ್ಯಕ್ರಮದಲ್ಲಿ ಶಿಕ್ಷಕಿ ರಶ್ಮಿ ಕುಂದಾಪುರ ಅವರಿಗೆ ರೋಟರಿ ನ್ಯಾಷನಲ್ ಬಿಲ್ಡರ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.

. . . . . . .

ರೋಟೇರಿಯನ್ ವಿನಯ್ ಕುಮಾರ್ ಅವರು ಅಂತರರಾಷ್ಟ್ರೀಯ ಸಾಕ್ಷರತಾ ದಿನದ ಮಹತ್ವದ ಕುರಿತು ಮಾಹಿತಿ ನೀಡಿದರು. ಸಾಕ್ಷರತೆ ಮತ್ತು ಶಿಕ್ಷಣವು ಸಮಾಜದ ಪ್ರಗತಿಗೆ ಪ್ರಮುಖ ಆಧಾರವಾಗಿದ್ದು, ಪ್ರತಿಯೊಬ್ಬರಿಗೂ ಶಿಕ್ಷಣದ ಅವಕಾಶ ದೊರೆಯಬೇಕು ಎಂದು ಅವರು ತಿಳಿಸಿದರು. ಇದೇ ಸಂದರ್ಭದಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರುವ ವನಮಹೋತ್ಸವ ಕಾರ್ಯಕ್ರಮವನ್ನೂ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಅಧ್ಯಕ್ಷ ರೋಟೇರಿಯನ್ ಆರಿಫ್ ಬೆಳ್ಳಾರೆ ವಹಿಸಿದ್ದರು. ರೋಟೇರಿಯನ್ ರವೀಂದ್ರಗೌಡ ಸ್ವಾಗತಿಸಿದರು. ಪ್ರಶಾಂತ್ ಟಿ. ವಂದಿಸಿದರು.

ವೇದಿಕೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷರು, ರೋಟರಿ ಕ್ಲಬ್ ಬೆಳ್ಳಾರೆ ಟೌನ್‌ನ ನಿಕಟಪೂರ್ವ ಅಧ್ಯಕ್ಷ ಚಂದ್ರಶೇಖರ್ ರೈ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ರೋಟರಿ ಕ್ಲಬ್ ಬೆಳ್ಳಾರೆ ಟೌನ್‌ನ ಸದಸ್ಯರು, ಎಸ್‌ಡಿಎಂಸಿ ಸದಸ್ಯರು ಹಾಗೂ ಶಾಲಾ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸಾಕ್ಷರತೆ, ಶಿಕ್ಷಣ ಹಾಗೂ ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರಿದ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading