ಸೆ.18ರಂದು ಮಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿ. ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ – ಸಿ.ಎಂ.ಗೆ ಸುಳ್ಯದ ವಿದ್ಯುತ್ ಸಮಸ್ಯೆ ಸೇರಿದಂತೆ ಪ್ರಮುಖ 35 ಬೇಡಿಕೆಗಳ ಮನವಿ ಸಲ್ಲಿಸಿದ ಶಾಸಕಿ ಭಾಗೀರಥಿ ಮುರುಳ್ಯ

ರಾಜ್ಯದ ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡದ ಮಂಗಳೂರಿನಲ್ಲಿ ಸೆ.18ರಂದು ಇದೇ ಮೊದಲ ಭಾರಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ರಾಜ್ಯ ಸರಕಾರದ ಸಚಿವ ಸಂಪುಟ ಸಭೆಯು ನಡೆಯಲಿದ್ದು, ದ.ಕ.ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರದ ವಿದ್ಯುತ್ ಸಮಸ್ಯೆ ಸೇರಿದಂತೆ ಪ್ರಮುಖ 35 ಬೇಡಿಕೆಗಳನ್ನು ಸಂಪುಟ ಸಭೆಯಲ್ಲಿ ಚರ್ಚಿಸಿ ಅನುದಾನವನ್ನು ಬಿಡುಗಡೆಗೊಳಿಸುವಂತೆ ಶಾಸಕಿ ಭಾಗೀರಥಿ ಮುರುಳ್ಯ ಅವರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಸುಳ್ಯ ವಿಧಾನಸಭಾ ಕ್ಷೇತ್ರದ ಪ್ರಮುಖ 35 ಬೇಡಿಕೆಗಳ ಮನವಿ ಸಲ್ಲಿಸಲಾಯಿತು.

. . . . . . . . .

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಮುಖವಾಗಿ ಪ್ರವಾಸೋದ್ಯಮ ಉತ್ತೇಜಿಸುವ ನಿಟ್ಟಿನಲ್ಲಿ 1837ರ ಅಮರ ಸುಳ್ಯ ಸ್ವಾತಂತ್ರ್ಯ ಹೋರಾಟದ ನೆನಪಿಗೆ ಕೆದಂಬಾಡಿ ರಾಮಯ್ಯಗೌಡ ಥೀಮ್ ಪಾರ್ಕ್ ಮತ್ತು ನಿರಂತರ ವಿದ್ಯುತ್ ಪೂರೈಕೆಗಾಗಿ 33kv ವಿದ್ಯುತ್ ಸಂಪರ್ಕವನ್ನು ಭೂಗತ ಲೈನ್ ಗಳಾಗಿ ಪರಿವರ್ತಿಸುವುದು ಹಾಗೂ ತುಳುಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸಿಸುವಂತೆ ಮನವಿ ಸಲ್ಲಿಸಲಾಗಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading