ಮಲೆನಾಡಿನ ಪ್ರಮುಖ ಬೇಡಿಕೆಗಳಿಗಾಗಿ ಮಲೆನಾಡು ಜಂಟಿ ಕ್ರಿಯಾ ಸಮಿತಿ ಹಾಗೂ ರೈತ ಸಂಘದ ನೇತೃತ್ವದಲ್ಲಿ ಸೆ.18ರಂದು ಮಂಗಳೂರು ಚಲೋ

ಸುಳ್ಯ: ಮಲೆನಾಡಿನ ಆಚಾರ–ವಿಚಾರ, ಆಹಾರ ಪದ್ಧತಿ, ಸಂಸ್ಕೃತಿ ಹಾಗೂ ಪರಿಸರ ಸಂರಕ್ಷಣೆ ಸೇರಿದಂತೆ ವಿವಿಧ ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮಲೆನಾಡು ಜಂಟಿ ಕ್ರಿಯಾ ಸಮಿತಿ (ರಿ.) ಸುಳ್ಯ, ದಕ್ಷಿಣ ಕನ್ನಡ ಹಾಗೂ ರೈತ ಸಂಘದ ವತಿಯಿಂದ ಸೆಪ್ಟೆಂಬರ್ 18ರಂದು ಮಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ.

. . . . . . . . .

ಮಲೆನಾಡು ಪ್ರದೇಶಕ್ಕೆ ಸಂವಿಧಾನದ 371ನೇ ವಿಧಿಯಡಿ ವಿಶೇಷ ಸ್ಥಾನಮಾನ ಕಲ್ಪಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ. ಮಲೆನಾಡಿನ ವಿಶಿಷ್ಟ ಆಚಾರ–ವಿಚಾರ, ಆಹಾರ ಪದ್ಧತಿ, ಸಂಸ್ಕೃತಿ ಮತ್ತು ಪರಿಸರವನ್ನು ಸಂರಕ್ಷಿಸುವ ನಿಟ್ಟಿನಲ್ಲಿ ವಿಶೇಷ ಸ್ಥಾನಮಾನ ಅಗತ್ಯ ಎಂದು ಸಂಘಟನೆಗಳು ಆಗ್ರಹಿಸಿವೆ.

. . . . . . .

ಅವೈಜ್ಞಾನಿಕವಾಗಿರುವ ಕಸ್ತೂರಿ ರಂಗನ್ ವರದಿ ಜಾರಿಯನ್ನು ವಿರೋಧಿಸಿ, ರಾಜ್ಯ ಸರ್ಕಾರ ವಿಶೇಷ ಅಧಿವೇಶನದಲ್ಲಿ ವರದಿ ಜಾರಿಗೆ ವಿರುದ್ಧ ನಿರ್ಣಯ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

ಅದೇ ರೀತಿ, ಗಿರಿಜನರ ರಕ್ಷಣೆ ಹಾಗೂ ಅವರ ಸಾಂಪ್ರದಾಯಿಕ ಆಚಾರ–ವಿಚಾರಗಳ ಸಂರಕ್ಷಣೆಯ ದೃಷ್ಟಿಯಿಂದ ಈ ಹಿಂದೆ ಜಾರಿಯಲ್ಲಿದ್ದ ಆಯುಧ ಕಾನೂನನ್ನು ಮರುಸ್ಥಾಪಿಸಬೇಕು ಎಂಬ ಬೇಡಿಕೆಯನ್ನೂ ಮುಂದಿಡಲಾಗಿದೆ.

ಈ ಎಲ್ಲ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೆ.18ರಂದು ಪಡೀಲ್, ಮಂಗಳೂರು ಇಲ್ಲಿ ಮಂಗಳೂರು ಚಲೋ ನಡೆಯಲಿದೆ ಎಂದು ಮಲೆನಾಡು ಜಂಟಿ ಕ್ರಿಯಾ ಸಮಿತಿ ಹಾಗೂ ರೈತ ಸಂಘದ ಪ್ರಕಟಣೆ ತಿಳಿಸಿದೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading